ಆಟೋ ಚಾಲಕರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಿ ಶಕ್ತಿ ತುಂಬಲಿ: ದಿಲೀಪ್ ಅರ್ಗೇಕರ್

ಕಾರವಾರ: ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಘೋಷಿಸಿದ್ದು ಆಟೋ ಚಾಲಕ ಮತ್ತು ಮಾಲಕರ ಜೀವನದ ಮೇಲೆ ದುಷ್ಪರಿಣಾಮ ಉಂಟು ಮಾಡಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಸರ್ಕಾರ ನೆರವಿಗೆ ಬರಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಆಟೋ ಚಾಲಕ ಮಾಲಕರ ಸಂಘದ ಜಿಲ್ಲಾಧ್ಯಕ್ಷ ದಿಲೀಪ್ ಜಿ. ಅರ್ಗೇಕರ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಶಕ್ತಿ ಯೋಜನೆಯನ್ನು ಜಾರಿ ಮಾಡಿದ ಪರಿಣಾಮ ಮಹಿಳೆಯರು ಉಚಿತವಾಗಿ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ನಗರ ಪ್ರದೇಶಗಳಲ್ಲಿಯೂ ಮಹಿಳೆಯರು ಬಸ್ ಪ್ರಯಾಣ ಮೆಚ್ಚಿಕೊಂಡಿದ್ದಾರೆ. ಹಾಗಾಗಿ ಆಟೋ ರಿಕ್ಷಾಗಳಿಗೆ ಗ್ರಾಹಕರಿಲ್ಲದೆ ತೊಂದರೆ ಅನುಭವಿಸುವಂತೆ ಆಗಿದೆ. ವಾಹನಗಳ ನಿರ್ವಹಣೆ ಇನ್ಶೂರೆನ್ಸ್ ಮತ್ತು ಇತರ ನಿರ್ವಹಣಾ ವೆಚ್ಚವು ಅಧಿಕವಾಗಿದ್ದು ಆಟೋರಿಕ್ಷಾ ಚಾಲಕರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.

ಈ ಹಿಂದೆ ದಿನಪೂರ್ತಿ ದುಡಿದರೂ ಜೀವನ ನಿರ್ವಹಣೆಯಷ್ಟು ಮಾತ್ರ ಗಳಿಕೆಯಾಗುತ್ತಿತ್ತು. ಈಗ ಅದು ಇಲ್ಲವಾಗಿದೆ. ಸರ್ಕಾರದ ಯಾವುದೇ ಯೋಜನೆಗಳು ಬಡಜನರ ಪರವಾಗಿದ್ದು ಅದನ್ನು ನಾವು ಪೂರ್ಣವಾಗಿ ವಿರೋಧಿಸುವುದಿಲ್ಲ. ಆದರೆ ಈ ಯೋಜನೆಗಳಿಂದ ಬಡವರೇ ಆಗಿರುವ ಇನ್ನೊಂದು ವರ್ಗಕ್ಕೆ ಹಾನಿಯಾಗದಂತೆ ನೋಡಿಕೊಳ್ಳಬೇಕಾದದ್ದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆ ಆಟೋ ಚಾಲಕರಿಗೆ ಕನಿಷ್ಠ 10,000 ರೂ. ಮಾಸಿಕ ಪ್ಯಾಕೇಜ್ ಘೋಷಣೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈಗಾಗಲೇ ಕೆಲ ಆಟೋ ಚಾಲಕರು ಕೂಲಿ ಕೆಲಸಕ್ಕೆ ಇಳಿದಿದ್ದಾರೆ. ನಿರ್ವಹಣೆ ಇಲ್ಲದೆ ವಾಹನಗಳು ಹಾಳಾಗುತ್ತಿವೆ. ಮಕ್ಕಳ ವಿದ್ಯಾಭ್ಯಾಸ ಅನಾರೋಗ್ಯ ಮದುವೆ ಮತ್ತಿತರ ಕಾರಣಕ್ಕೆ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು ಈಗ ದುಡಿಮೆಯು ಇಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಹಾಕಿಕೊಳ್ಳುವಂತಾಗಿದೆ. ಎಲ್ಲಾ ಕುಟುಂಬಗಳ ಮಹಿಳೆಯರು ಉಚಿತ ಪ್ರಯಾಣವನ್ನು ಅನುಭವಿಸುತ್ತಿದ್ದಾರೆ. ಆದರೆ ಆಟೋ ಚಾಲಕರ ಕುಟುಂಬದ ಮಹಿಳೆಯರು ಸಂಕಷ್ಟದಲ್ಲಿ ಹೊಟ್ಟೆಗೆ ಹಿಟ್ಟಿಲ್ಲವೆಂದು ಅಂಗಲಾಚುವ ಪರಿಸ್ಥಿತಿ ಬಂದಿದೆ.

ಆಟೋ ಚಾಲಕರು ಸ್ವಾಭಿಮಾನದಿಂದ ದಿನವಿಡಿ ದುಡಿಯುತ್ತಿದ್ದಾರೆ. ಸರ್ಕಾರದ ಯೋಜನೆ ಅದಕ್ಕೆ ಅಡ್ಡಿಯಾಗಿದೆ. ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಬೇಕು ಇಲ್ಲವೇ ಪರ್ಯಾಯಮಾರ್ಗವನ್ನು ಶೀಘ್ರದಲ್ಲಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಆಟೋ ಚಾಲಕರು ಮತ್ತು ಮಾಲಕರು ಆರ್ಥಿಕ ಸಂಕಷ್ಟದಿಂದ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದು ದಿಲೀಪ್ ಜಿ. ಅರ್ಗೇಕರ್ ಎಚ್ಚರಿಸಿದ್ದಾರೆ.

Gayathri SG

Recent Posts

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

10 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

38 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

1 hour ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

1 hour ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

2 hours ago