ಗೋಕರ್ಣ: ಸಮಸ್ಯೆ, ಸವಾಲುಗಳು ಜೀವನದ ಅವಕಾಶಗಳು ಎಂದ ರಾಘವೇಶ್ವರ ಶ್ರೀ

ಗೋಕರ್ಣ: ಸಮಸ್ಯೆಗಳು,ಸವಾಲುಗಳು ಬಂದಾಗ ಧೃತಿಗೆಡದೆ ಅವುಗಳನ್ನುಅವಕಾಶಗಳಾಗಿ ಪರಿವರ್ತಿಸಿಕೊಳ್ಳಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಧನಾತ್ಮಕ ದೃಷ್ಟಿ ಇದ್ದರೆ ಅಂಥ ಸವಾಲುಗಳು ನಮ್ಮ ಪಾಲಿಗೆ ಭಾಗ್ಯವಾಗಿ ಪರಿವರ್ತನೆಯಾಗುತ್ತದೆ. ಋಣಾತ್ಮಕ ದೃಷ್ಟಿ ಇದ್ದರೆ ಇದು ಸಂಕಟವಾಗಿ ಪರಿಣಮಿಸುತ್ತದೆ ಎಂದು ವಿಶ್ಲೇಷಿಸಿದರು.

ಹಲವು ಮಹಾಪುರುಷರು ಇಂಥ ಸವಾಲುಗಳನ್ನು ಎದುರಿಸಿ ಗೆದ್ದ ಕಾರಣದಿಂದಲೇ ಮಹಾತ್ಮರು ಎನಿಸಿಕೊಂಡಿದ್ದಾರೆ ಎಂದು ನುಡಿದರು,.ಜೀವನದ ಹಾದಿಯಲ್ಲಿ ಮುನ್ನಡೆಯುವಾಗ ಸಮಾಜ ಹೂ ಎರಚುತ್ತದೆ ಎಂಬ ನಿರೀಕ್ಷೆ ಬೇಡ; ಜನ ನಮ್ಮೆಡೆಗೆ ಕಲ್ಲು ತೂರುತ್ತಾರೆ ಎಂಬ ಭಾವನೆಯಿಂದ ಧೈರ್ಯವಾಗಿ ಎದುರಿಸಿ. ತೂರಿದ ಕಲ್ಲೇ ನಮ್ಮ ಬದುಕಿನ ಭವ್ಯ ಭವನಗಳಿಗೆ ಸೋಪಾನವಾಗಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜನಸಾಮಾನ್ಯರು ಮಾತ್ರವಲ್ಲದೇ ರಾಜನಾದವನಿಗೆ ವಿಶೇಷ ದೃಷ್ಟಿ ಬೇಕು.ಒಳನೋಟ,ದೂರದೃಷ್ಟಿ ಅಗತ್ಯ ಎಂದು ವಿವರಿಸಿದರು.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

33 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

56 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago