ಉತ್ತರಕನ್ನಡ

ಗೋಕರ್ಣ: ರಾಮಾಯಣದಿಂದ ಪುರುಷಾರ್ಥದ ಪ್ರಾಪ್ತಿ- ರಾಘವೇಶ್ವರ ಶ್ರೀ

ಗೋಕರ್ಣ: ಎಲ್ಲ ಜೀವಿಗಳೂ ಬಯಸುವುದು ಸುಖವನ್ನು. ಆದರೆ ಸುಖವನ್ನು ಬಯಸುವುದು ಮಾತ್ರ ನಮ್ಮ ಕೈಯಲ್ಲಿದೆ. ಬಯಸಿದುದನ್ನು ಪಡೆಯುವುದು ನಮ್ಮ ಕೈಮೀರಿದೆ. ರಾಮಾಯಣವು ಇರುವ ಸುಖವನ್ನಲ್ಲದೆ, ಇಲ್ಲದ, ಕೈಮೀರಿದ ಸುಖವನ್ನೂ ಕರುಣಿಸುವಂಥದ್ದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಶ್ರೀಗಳೇ ಧರ್ಮಭಾರತೀ ಪತ್ರಿಕೆಯಲ್ಲಿ ಬರೆದಿರುವ  ಭಾವ ರಾಮಾಯಣವನ್ನು ರಾಮಾರ್ಪಣಗೊಳಿಸಿ ಆಶೀರ್ವಚನ ನೀಡಿದರು.

ರಾಮಾಯಣವನ್ನು ಓದುವಾಗಲೇ ಶಬ್ದಗಳಲ್ಲಿ ಹೇಳಲಾರದ ಸುಖದ ಅನುಭವವಾಗುತ್ತದೆ. ರಾಮಾಯಣವು ತೋರಿದ ಹಾದಿಯಲ್ಲಿ ನಡೆದಾಗ ಜೀವನದಲ್ಲಿ ಅನ್ಯಾನ್ಯ ಸುಖಗಳು ಒದಗಿ ಬರುತ್ತವೆ. ರಾಮಾಯಣದ ಅವಲೋಕನವು ಪುಣ್ಯವನ್ನು ತಂದುಕೊಡುತ್ತದೆ.  ಹೀಗೆ ರಾಮಾಯಣದ ಅನುಸಂಧಾನದಿಂದ ಮೂರು ಬಗೆಯ ಸುಖಗಳ ಪ್ರಾಪ್ತಿಯಾಗುತ್ತದೆ ಎಂದರು.

ರಾಮಾಯಣದ ಓದಿನಿಂದ ಜೀವಿಯು ಬಯಸುವ ಧರ್ಮ, ಅರ್ಥ, ಕಾಮ, ಮೋಕ್ಷಗಳೆಂಬ ಪುರುಷಾರ್ಥಗಳು ಲಭಿಸುತ್ತವೆ. ನಾಲ್ಕು ಪುರುಷಾರ್ಥಗಳನ್ನು ಹೊರತುಪಡಿಸಿ ಜೀವಿ ಏನನ್ನೂ ಬಯಸುವುದಿಲ್ಲ. ಏನನ್ನೇ ಬಯಸಿದರೂ ಅದು ಪುರುಷಾರ್ಥಗಳಲ್ಲೇ ಬರುತ್ತದೆ. ಹಾಗಾಗಿ ರಾಮಾಯಣದಿಂದ ಪುರುಷಾರ್ಥ ಸಿದ್ಧಿಸುತ್ತದೆ ಎಂದು ಬಣ್ಣಿಸಿದರು.

ಇಂದು ಜಗತ್ತು ಹಣದ ಹಿಂದೆ ಓಡುತ್ತಿದೆ. ರಾಮಾಯಣವನ್ನು ಪಠಿಸಿದರೆ ಸಂಪತ್ತೇ ನಮ್ಮೆಡೆಗೆ ಹರಿದು ಬರುತ್ತದೆ ಎಂದು ವಿಶ್ಲೇಷಿಸಿದರು.

ಧರ್ಮಭಾರತೀ ಸಂಪಾದಕ ಕೃಷ್ಣಾನಂದ ಶರ್ಮಾ ಪ್ರಸ್ತಾವಿಕವಾಗಿ ಮಾತನಾಡಿದರು. ಧರ್ಮಭಾರತೀಪತ್ರಿಕೆ ರಾಮಾರ್ಪಣಗೊಳಿಸಿದ ಶ್ರೀಗಳು ನಂತರ ಪತ್ರಿಕೆಯನ್ನು ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಮತ್ತು ಶಿಷ್ಯಭಕ್ತರಿಗೆ ಅನುಗ್ರಹಿಸಿ, ರಾಮಾಯಣ ಆಧರಿತ ಪಾಠ ಮಾಡಿದರು.

ವಿಶ್ವವಿದ್ಯಾಪೀಠದ ಲೋಕಸಂಪರ್ಕಾಧಿಕಾರಿ ಅಶ್ವಿನೀ ಉಡುಚೆ ಭಾವರಾಮಾಯಣದ ಮಹತ್ತ್ವವನ್ನು ವಿವರಿಸಿದರು. ಮಹಾಮಂಡಲದ ಅಧ್ಯಕ್ಷ ಆರ್, ಎಸ್ ಹೆಗಡೆ ಹರಗಿ, ಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ಶ್ರೀಭಾರತೀಪ್ರಕಾಶನದ ಅಧ್ಯಕ್ಷ ಸಚಿನ್, ಉಪಸಂಪಾದಕ ಗಣೇಶ ಕೃಷ್ಣ ಹೆಗಡೆ, ಪ್ರಸರಣ ಮಾರ್ಗದರ್ಶಕ ಮಹೇಶ ಚಟ್ನಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago