News Karnataka Kannada
Monday, April 29 2024
ಉತ್ತರಕನ್ನಡ

ದೇಶದಾದ್ಯಂತ ‘ವಕ್ಫ್ ಬೋರ್ಡ್ ಕಾಯ್ದೆ’ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ

Hindu Rashtra Awareness Campaign to repeal 'Waqf Board Act' across the country
Photo Credit : News Kannada

ಕಾರವಾರ: ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ತಡೆಯಲು ಸೂಕ್ತ ಕ್ರಮಕೈಗೊಳ್ಳುವಂತೆ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಸಮಿತಿಯೂ ನಗರದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ, ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ.

ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ, ಹಾಗಾಗಿ ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಕಾರವಾರದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದ ಮನವಿಯನ್ನು ಅಪಾರ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನೂ ಸಲ್ಲಿಸಲಾಯಿತು.

ವಕ್ಫ್ ಬೋರ್ಡ್ ವಶಪಡಿಸಿಕೊಂಡ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದಲ್ಲಿ 8 ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ ‘ಲ್ಯಾಂಡ್ ಜಿಹಾದ್’ ಆಗಿದೆ. ಹಾಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು. ದೇಶದಲ್ಲಿ ’ಸಮಾನ ನಾಗರಿಕ ಕಾನೂನು ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳು, ಸರಕಾರಿ ಇಲಾಖೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ನಡವಳಿಕೆ ಸಿಗುವಂತಾಗಬೇಕು. ಈ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ‘ವಕ್ಫ್ ಕಾನೂನು ವಿರುದ್ಧ ಪ್ರಬಲ ಚಳವಳಿ ನಡೆಸಬೇಕಾಗುತ್ತದೆ ಎಂದು ಈ ಆಂದೋಲನದ ಮೂಲಕ ಎಚ್ಚರಿಸಲಾಯಿತು.

ಈ ಸಂದರ್ಭದಲ್ಲಿ ಬಾಬು ಅಂಬಿಗ, ರಾಮದಾಸ ಕುಡತರಕರ, ಪ್ರಶಾಂತ ಪೆಡ್ನೆಕರ, ಪಂಡರಿನಾಥ ಗುರವ, ವಿನಾಯಕ ಸಾವಂತ್, ರತನ್, ದುರ್ಗೇಕರ್, ಪವನ್ ದುರ್ಗೆಕರ್, ದರ್ಶನ್, ಹಿಂದೂ ಜನಜಾಗೃತಿ ಸಮಿತಿಯ ಪರೇಶ್ ಗೋವೇಕರ್ ಸೋಮೇಶ್ ಗುರವ್ ಅಶೋಕ್ ಚೌಹಾನ್, ಸುಷ್ಮಾ ಕುರುಡೇಕರ್, ಸಾಗರ್ ಕುರುಡೇಕರ್ ಮುಂತಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು