ಕರಾವಳಿ

ಭಾರೀ ಮಳೆ: ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ಉತ್ತರ ಕನ್ನಡ: ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಕೊಡಗು , ಉತ್ತರ ಕನ್ನಡ ಸೇರಿದಂತೆ ಐದು ಜಿಲ್ಲೆಯಲ್ಲಿ ಭಾರೀ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸೋಮವಾರ (ಜುಲೈ 24) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜಿಲ್ಲೆಯ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಶಿವಮೊಗ್ಗ ಡಿಡಿಪಿಐ ಪರಮೇಶ್ವರಪ್ಪ ಆದೇಶಿಸಿದ್ದಾರೆ. ಅನುದಾನಿತ, ಅನುದಾನ ರಹಿತ ಶಾಲೆಗಳಿಗೂ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಮತ್ತು ಹಾಸನ ತಾಲೂಕಿನಾದ್ಯಂತ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಾಳೆಯೂ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆ ತಾಲೂಕಿನ ಶಾಲೆ ಮತ್ತು ಪಿಯುಸಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರ ವರೆಗೂ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Ashitha S

Recent Posts

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

5 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

23 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

33 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

46 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

10 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

11 hours ago