ಜೇನು ಕೃಷಿಕ ಮಧುಕೇಶ್ವರ ಹೆಗಡೆ ಅವರಿಗೆ ಡಾಕ್ಟರೇಟ್ ಪ್ರದಾನ

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ ಜೇನು ಕೃಷಿಕ ತಾರಗೋಡ ಕಲ್ಲಳ್ಳಿ ಮನೆಯ ಮಧುಕೇಶ್ವರ ಹೆಗಡೆ ಅವರಿಗೆ ತಮಿಳುನಾಡಿನ ಪೆರಂಬಲೂರಿನಲ್ಲಿ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಯಿತು. ಪಾರಂಪರಿಕ ವೈದ್ಯಕೀಯ ಹಾಗೂ ಜೇನಿನ ಮೂಲಕ ನೀಡಲಾಗುವ ಎಫಿ ಥೆರಪಿ ಚಿಕಿತ್ಸೆ ನೀಡುವ ಕುರಿತು ಮಂಡಿಸಿದ ವಿಷಯಕ್ಕೆ ಡಾಕ್ಟರೇಟ್ ಪದವಿ ನೀಡಲಾಯಿತು.

ಜೇನು ಹುಳ ಚುಚ್ಚಿಸುವಿಕೆಯ ಎಫಿ ಥೆರಪಿ ಮೂಲಕ ಸಂಧಿವಾತ, ಶರೀರದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಚಿಕಿತ್ಸೆ ನೀಡುವ ಮೂಲಕ ಈಗಾಗಲೇ ಜೇನು ಮಧುಕೇಶ್ವರ ಗಮನ ಸೆಳೆದಿದ್ದಾರೆ. ಡಾಕ್ಟರೇಟ್ ಪದವಿಗೆ ಕೃಷಿ ವಿಜ್ಞಾನ ಕೇಂದ್ರದ ಕೀಟ ಶಾಸ್ತ್ರದ ವಿಜ್ಞಾನಿ ಡಾ. ರೂಪಾ ಪಾಟೀಲ ಶಿಫಾರಸ್ಸು ಮಾಡಿದ್ದರು. ತೋಟಗಾರಿಕಾ ಇಲಾಖೆ ಅಧಿಕಾರಿಗಳು ಕೂಡ ಸಹಕಾರ ನೀಡಿದ್ದರು.

ಮಧುಕೇಶ್ವರ ಹೆಗಡೆ ಅವರಿಗೆ ಶ್ರೀಲಂಕಾದ ಪ್ಲಾಂಟೇನನ್ ಇಂಡಸ್ಟ್ರೀ ಬೋರ್ಡನ ಶ್ರೀಕೃಶ್ ನಾಥ ಪಥಿರಾಜ, ಶ್ರೀಲಂಕಾದ ಕೋಲಂಬೋ ವಿವಿಯ ಪ್ರೊಫೆಸರ್ ಎಂ ಜಿ ಜಿ ಹೇಮಕುಮಾರ, ದೆಹಲಿ ಇಂರನ್ಯಾಶನಲ್ ಎಜ್ಯುಕೇಶನ್ ರಿಸರ್ಚ ಸೆಂಟರ್ ನ ಚೇರಮನ್ ಸಂದೀಪಕುಮಾರ, ಒಡಿಸ್ಸಾದ ಡಾ. ಸಂಜಯಕುಮಾರ ಬೈರಿಕ್, ಅಮೆರಿಕದ ಡಾ. ಸುರೇಶ ನರಪಾವಿ ಇತರರು ಡಾಕ್ಟರೇಟ್ ಪ್ರದಾನ ಮಾಡಿದರು.

Gayathri SG

Recent Posts

ದೇಶದದ್ಯಾಂತ ಪ್ರಜ್ವಲಿಸಿದ ಪ್ರಜ್ವಲ್‌ ಪೆನ್‍ಡ್ರೈವ್; ಈತ ಅದೆಂಥಾ ವಿಕೃತಕಾಮಿಯಾಗಿರಬೇಡ

ಹಾಸನದ ಸಂಸದರೂ ಆಗಿರೋ  ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಭವಾನಿ ದಂಪತಿಯ ಹಿರಿಯ ಮಗ ಪ್ರಜ್ವಲ್. ಈತನ ಕಾಮಕಾಂಡದ…

20 mins ago

ಜಾತಿ ನಿಂದನೆ ಕೇಸ್ ಹೆದರಿದ ಯುವಕ ಆತ್ಮಹತ್ಯೆಗೆ ಶರಣು

ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ…

50 mins ago

ಚಾರ್ಜ್​ಗೆ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಭಸ್ಮ

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.

1 hour ago

ದನದ ಮಾಂಸ ರಫ್ತಿನಲ್ಲಿ ಬಿಜೆಪಿ 2ನೇ ಸ್ಥಾನ: ಸಂತೋಷ್‌ ಲಾಡ್‌

ಬಿಜೆಪಿ ಸರಕಾರದ ಸಾಧನೆ ಕೇವಲ ಎರಡೇ ಎರಡು. ಒಂದು ದನದ ಮಾಂಸ ರಫ್ತಿನಲ್ಲಿ 2ನೇ ಸ್ಥಾನ. ಎರಡು ಮೋದಿ ಸ್ವಜಾಹೀರಾತಿಗಾಗಿ…

1 hour ago

ಚಾಮರಾಜನಗರ: ಸಾರಿಗೆ ಬಸ್‌ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್…

1 hour ago

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ ನಡೆದಿದೆ.

2 hours ago