ಕಾರವಾರ: ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ,ಯುವ ಮೋರ್ಚಾದ 42 ಸದಸ್ಯರಿಂದ ರಾಜೀನಾಮೆ

ಕಾರವಾರ: ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾ  ಕಾರ್ಯಕರ್ತರಿಂದ ಸಾಮೂಹಿಕ ರಾಜೀನಾಮೆ ನೀಡಿ, ಕಣ್ಣಿಗೆ ಪಟ್ಟಿ ಕಟ್ಟಿ ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಹಾಕಿ ನಗರದಲ್ಲಿ ಪ್ರತಿಭಟನೆ  ನಡೆಸಿದರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಕ ಸೇರಿದ್ದ ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾ ಪದಾಧಿಕಾರಿಗಳು ಹಾಗು ಪಕ್ಷದ ಪದಾಧಿಕಾರಿಗಳು ಸೇರಿ ಪ್ರವೀಣ ನೆಟ್ಟಾರೂ ಹಂತಕರನ್ನು ಬಂಧಿಸುವಂತೆ ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ವೈಫಲ್ಯವನ್ನು ಖಂಡಿಸಿ ಕಾರವಾರ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾದ 42 ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿ ಬಿಜೆಪಿ ಸರಕಾರದ ವಿರುದ್ಧ ಗುರುವಾರ ತೀವ್ರ ಪ್ರತಿಭಟನೆ ನಡೆಸಿದರು.

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಗರದ ಜಿಲ್ಲಾಧಿಕಾರಿ ಕಚೇರಿ ಜಮಾಯಿಸಿದ ಗ್ರಾಮೀಣ ಹಾಗೂ ನಗರ ಘಟಕದ ಪದಾಧಿಕಾರಿಗಳು ಸರಕಾರದ ವೈಫಲ್ಯದ ವಿರುದ್ಧ ಕಿಡಿ ಕಾರಿದರು. ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷ ಶುಭಂ ಕಳಸ ಮಾತನಾಡಿ ಬಿಜೆಪಿ ಪಕ್ಷ ಸಂಘಟನೆಗೆಂದು ಯುವಕರನ್ನು ಬಳಸಿಕೊಂಡು ರಾಜಕಾರಣ ಮಾಡಿ ಇದೀಗ ನಮ್ಮ ಯುವ ಕಾರ್ಯಕರ್ತರು ಹತ್ಯೆಗೀಡಾದಾಗ ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದ್ದೇವೆ ಎನ್ನುವ ನೀವು ಯಾಕೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ.

ಹೀಗೆ ಯುವಕರ ಸಾವು ನಮಗೆ ತೀವ್ರ ನೋವನ್ನುಂಟು ಮಾಡುತ್ತಿದ್ದು ನಮ್ಮ ಸರಕಾರದ ವಿರುದ್ಧ ನಾವೇ ಘೋಷಣೆ ಕೂಗುತ್ತಿದ್ದೇವೆ. ಹಿಂದೂ ಶಾಲು ಧರಿಸಿ ಬಂದಿರುವ ನಾವು  ನಮ್ಮ ರಕ್ಷಣೆಗೆಂದು ಬಿಜೆಪಿ ಸರಕಾರವನ್ನು ಅಸ್ತಿತ್ವಕ್ಕೆ ತಂದಿದ್ದು ಇಲ್ಲಿ ನಮ್ಮ ಯುವಕರೇ ಸಾಯುತ್ತಿದ್ದರೆ ಮುದಿನ ದಿನ ನಮಗೂ ಇದೇ ಗತಿ ಬರಲಿದೆ ಎಂದರು.

ಮುಂದಿನ ಬಾರಿ ಬಿಜೆಪಿಗೆ ನಾವು ಬೆಂಬಲಿಸಬೇಕು ಎಂದಾದರೆ ಸಿಎಂ ಆಗುವವರು ಯಾರು ಎಂಬುದನ್ನು ಮೊದಲೇ ನಮಗೆ ತಿಳಿಸಬೇಕು. ಈ ರೀತಿಯ ಸಿಎಂ, ಗೃಹ ಸಚಿವರ  ಆಳ್ವಿಕೆ ನಮಗೆ ಬೇಡ. ಚುನಾವಣೆ ಮುಂಚಿತವೇ ಮುಖ್ಯಮಂತ್ರಿಗಳ ಹೆಸರನ್ನು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

Ashika S

Recent Posts

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

11 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

32 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

50 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

2 hours ago