News Karnataka Kannada
Friday, May 03 2024
ಉತ್ತರಕನ್ನಡ

ಕಾರವಾರ: ಅಪರೂಪದ ಕಾಯಿಲೆಗೆ ತುತ್ತಾದ ಬಾಲಕ, ಮುಖವನ್ನೇ ಆವರಿಸಿದ ಚಿಕ್ಕ ಗುಳ್ಳೆ

A boy suffering from a rare disease, a small blister that engulfed his face
Photo Credit : By Author

ಕಾರವಾರ: ನಗರದ ನಂದನಗದ್ದಾದ ಸುಮಾರು 4 ವರ್ಷದ ಮಗುವೊಂದು ಅಪರೂಪದ ಕಾಯಿಲೆಯೊಂದಕ್ಕೆ ತುತ್ತಾಗಿದೆ. ಪ್ರೇಮಾನಂದ ಕಾಂಬ್ಳೆ ಹಾಗೂ ಪ್ರಜ್ಞಾ ಕಾಂಬ್ಳೆ ದಂಪತಿಯು ನಂದನಗದ್ದಾದ ನಾಗನಾಥ ದೇವಸ್ಥಾನದ ಹತ್ತಿರದ ಪುಟ್ಟ ಗುಡಿಸಿಲಿನಂಥ ಮನೆಯೊಂದರಲ್ಲಿ ವಾಸಿಸುತ್ತಿದ್ದು, ಅವರ 4 ವರ್ಷದ ಮಗು ಮುದ್ದು ಮುದ್ದಾಗಿ ಆಡಿಕೊಂಡು ಬೆಳೆಯುತ್ತಿತ್ತು. ಆದರೆ ಏಳು ತಿಂಗಳುಗಳ ಹಿಂದೆ ಕಿವಿಯ ಹಿಂಬದಿಯಲ್ಲಿ ಆದ ಒಂದು ಚಿಕ್ಕ ಗುಳ್ಳೆ ಬರಬರುತ್ತಾ ದೊಡ್ಡದಾಗಿ ಇದೀಗ ಇಡೀ ಮುಖವನ್ನೇ ಆವರಿಸಿಕೊಂಡಿದ್ದು, ಕುಟುಂಬವನ್ನ ದುಃಖದಲ್ಲಿ ಮುಳುಗಿಸಿದೆ.

ಗುಳ್ಳೆ ಕೊಂಚ ದೊಡ್ಡದಾಗುತ್ತಿದ್ದಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವನ್ನ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಕಡಿಮೆಯಾಗದಾಗ ಕುಟುಂಬ ವಿವಿಧೆಡೆ ನಾಟಿ ಔಷಧಿಗಳನ್ನ ಮಾಡಿದ್ದು, ತದನಂತರ ಗುಳ್ಳೆ ಉಲ್ಬಣಗೊಳ್ಳಲಾರಂಭಿಸಿದೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬ, ಹೇಗೋ ಒಂದಷ್ಟು ಹಣವನ್ನ ಹೊಂದಾಣಿಸಿಕೊಡು ಮಂಗಳೂರಿನ ಫಾದರ್ ಮುಲ್ಲರ್‌ಗೆ ಆಸ್ಪತ್ರೆಗೆ ದಾಖಲಿಸಿ ಮಗುವಿಗೆ ಚಿಕಿತ್ಸೆ ಕೊಡಿಸಿದ್ದು, ಆದರೂ ಗುಣಮುಖವಾಗದೆ ನಂತರದ ದಿನಗಳಲ್ಲಿ ಗುಳ್ಳೆ ಮತ್ತಷ್ಟು ಬೆಳವಣಿಗೆಯಾಗಿದೆ. ಹೀಗಿದ್ದರೂ ಮಾಹಿತಿ ಕೊರತೆಯ ಕಾರಣ ಹಾಗೂ ಆರ್ಥಿಕ ಸಮಸ್ಯೆಯಿಂದಾಗಿ ಕುಟುಂಬ ದೊಡ್ಡ ಆಸ್ಪತ್ರೆಗಳೆಲ್ಲಿಗೂ ಹೋಗದೆ ಮನೆಯಲ್ಲೇ ಮಗುವನ್ನ ಆರೈಕೆ ಮಾಡಿದ್ದಾರೆ. ಕೆಲ ದಿನಗಳಲ್ಲೇ ಗುಳ್ಳೆ ಮತ್ತಷ್ಟು ದೊಡ್ಡದಾಗಿ ಇಡೀ ಮುಖವನ್ನೇ ಆವರಿಸಿಕೊಂಡಿದ್ದು, ಸದ್ಯ ಮುಖವೇ ಕಾಣದಂತಾಗಿದೆ.

ಶುಕ್ರವಾರ ಈ ಬಗ್ಗೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಅವರಿಗೆ ಸ್ಥಳೀಯರಾದ ಯುವರಾಜ ಎನ್ನುವವರು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಮಾಧವ ನಾಯಕರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಅವರ ಮನೆಗೆ ತೆರಳಿ ಮಗುವಿನ ಪರಿಸ್ಥಿತಿನೋಡಿ ತಮ್ಮ ಕಾರಿನಲ್ಲಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾರೆ. ಕ್ರಿಮ್ಸ್ ನಿರ್ದೇಶಕ ಡಾ.ಗಜಾನನ ನಾಯಕ, ಆರ್‌ಎಂಒ ಡಾ.ವೆಂಕಟೇಶ ಸೇರಿದಂತೆ ಅನೇಕ ವೈದ್ಯರುಗಳು ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿ ಮಗುವಿನ ಸ್ಥಿತಿ ಕಂಡು ಮರುಗಿದರು. ಡಾ.ಗಜಾನನ ನಾಯಕ ಅವರು ಹುಬ್ಬಳ್ಳಿಯ ಕಿಮ್ಸ್ ವೈದ್ಯರೊಂದಿಗೆ ಮಾತನಾಡಿ ಪರಿಸ್ಥಿತಿ ತಿಳಿಸಿದ್ದು, ಉಚಿತವಾಗಿ ಜಿಲ್ಲಾ ಆಸ್ಪತ್ರೆಯಿಂದ ಅಂಬ್ಯುಲೆನ್ಸ್ ಮಾಡಿಕೊಟ್ಟು ಹುಬ್ಬಳ್ಳಿಗೆ ಕಳುಹಿಸಿಕೊಡಲಾಗಿದೆ. ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕದಲ್ಲಿ ತುರ್ತಾಗಿ ರೆಫರಲ್ ಕೂಡ ಮಾಡಿಕೊಡಲಾಗಿದೆ. ಸದ್ಯ ಮಗು ಚಿಕಿತ್ಸೆ ಪಡೆದು ಗುಣಮುಖವಾಗಿ ಬರಲಿ ಎನ್ನುವುದೇ ಎಲ್ಲರ ಪ್ರಾರ್ಥನೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು