News Karnataka Kannada
Wednesday, May 08 2024
ಉತ್ತರಕನ್ನಡ

ಕಾರವಾರ: ನದಿಗೆ ಇಳಿದವನ್ನು ಎಳೆದೊಯ್ದ ಮೊಸಳೆ

Karwar: A crocodile dragged into a river
Photo Credit : By Author

ಕಾರವಾರ: ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬನನ್ನು ಮೊಸಳೆಗಳು ಎಳೆದೊಯ್ದ ಘಟನೆ ನಡೆದಿದೆ. ಈಜಲು ನದಿಗೆ ಇಳಿದಿದ್ದಾಗ ಮೊಸಳೆಗಳು ಎಳೆದೊಯ್ದಿವೆ ಎಂದು ಹೇಳಲಾಗಿದೆ.

ಮೊಸಳೆ ಎಳೆದೊಯ್ಯುವುದನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಗ ವ್ಯಕ್ತಿಗಾಗಿ ಕಾಳಿ ನದಿಯಲ್ಲಿ ಹುಡುಕಾಟ ನಡೆದಿದೆ. ಸ್ಥಳೀಯರ ಮಾಹಿತಿಯಂತೆ ಈ ವ್ಯಕ್ತಿ ನದಿ ದಂಡೆಯ ಮೇಲೆ ಬಟ್ಟೆ ಹಾಗೂ ಚಪ್ಪಲಿ ತೆಗೆದಿಟ್ಟು ಸ್ನಾನಕ್ಕಾಗಿ ನದಿಗೆ ಇಳಿದಿದ್ದಾರೆ.

ಈ ಭಾಗದಲ್ಲಿ ಮೊಸಳೆ ಹೆಚ್ಚಿದೆ. ಹೀಗಾಗಿ ನೋಡಿದವರು ತಕ್ಷಣವೇ ಮೇಲೆ ಬರುವಂತೆ ಕೂಗಿ ಹೇಳಿದ್ದಾರೆ. ಆದರೆ ಇಳಿದ ಕೆಲವೇ ಹೊತ್ತಿನಲ್ಲಿ ಎರಡು ಮೊಸಳೆಗಳು ಆತನ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗಿದೆ. ಇದನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದು, ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ.

ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು