ಉತ್ತರಕನ್ನಡ

ಕಾರವಾರ: ಕದ್ರಾ ಅರಣ್ಯ ವಲಯದಲ್ಲಿ ಹಾರುವ ಅಳಿಲಿನ ರಕ್ಷಣೆ

ಕಾರವಾರ: ಕದ್ರಾ ಅರಣ್ಯ ವಲಯದ ಗಾಯಗೊಂಡಿದ್ದ ಹಾರುವ ಅಳಿಲನ್ನು ವಿರ್ಜೆ ಬೀಟ್ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಿಸಿ, ಸೂಕ್ತ ಚಿಕಿತ್ಸೆ ನೀಡಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.

ಇದು ಬಹು ಅಪರೂಪ ಹಾಗೂ ಹಾರುವ ಅಳಿಲಾಗಿದ್ದು, ಮರದಿಂದ ಮರಕ್ಕೆ ಹಾರುವ ವೇಳೆ ಆಕಸ್ಮಾತಾಗಿ ಮಲ್ಲಾಪುರ ಟೌನ್ಶಿಪ್ನ ಎನ್ಪಿಸಿಐಎಲ್ ಸಿಬ್ಬಂದಿಯೋರ್ವರ ಮನೆಯ ಟೆರೇಸ್ ಮೇಲೆ ಬಿದ್ದಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯ ರಕ್ಷಕ ನಾಗರಾಜ್ ಅವರಿಗೆ ಕರೆ ಮಾಡಿ ತಿಳಿಸಿದ್ದರು. ನಾಗರಾಜ್ ಅವರು ಬಿಲಾಲ್ ಅವರಿಗೆ ಮಾಹಿತಿ ನೀಡಿದ್ದರು.

ಅವರು ಸ್ಥಳಕ್ಕೆ ತೆರಳಿ ಹಾರುವ ಅಳಿಲಿಗೆ ಅಗತ್ಯ ಚಿಕಿತ್ಸೆ ನೀಡಿ, ವಲಯ ಅರಣ್ಯ ಅಧಿಕಾರಿ ಲೋಕೇಶ್ ಪಾಟಣಕರ್ ಅವರ ಮಾರ್ಗದರ್ಶನದಲ್ಲಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

Sneha Gowda

Recent Posts

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

10 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

13 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

20 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

24 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

31 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

39 mins ago