ಕಾರವಾರ: ಗ್ರಾ.ಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿ.ಪಂ ಗೆ ಮನವಿ

ಕಾರವಾರ: ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘವು ಸಿಐಟಿಯು ಸಂಘಟನೆಯ ಜೊತೆ ಸೇರಿ ನಗರದಲ್ಲಿ ಮೆರವಣಿಗೆ ನಡೆಸಿ ಜಿಪಂಗೆ ಮನವಿ ಸಲ್ಲಿಸಿದರು.

ನಗರದ ರಂಗಮಂದಿರದ ಬಳಿಯಿಂದ ಮೆರವಣಿಗೆ ಆರಂಭಿಸಿದ ಪ್ರಮುಖ ರಸ್ತೆಯಲ್ಲಿ ಸಂಚರಿಸಿದರು. ಬಳಿಕ ಜಿಪಂ ಕಚೇರಿ ಬಳಿ ತೆರಳಿ ತಮ್ಮ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ, ಘೋಷಣೆ ಹಾಕಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು 25-30 ವರ್ಷಗಳಿಂದ ಪಂಚಾಯತ್ ನೌಕರರು ಪ್ರಾಮಾಣಿಕವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇದರಲ್ಲಿ ಸಾಕಷ್ಟು ಪಂಚಾಯತ್ ನೌಕರರಿಗೆ ಜಿಪಂನಿಂದ ಖಾಯಂ ನೌಕರರು ಎಂದು ಅನುಮೋದನೆ ಆಗಿಲ್ಲ. ಅನುಮೋದನೆ ಆಗದೆ ಇರುವ ಸಿಬ್ಬಂದಿಗಳ ಹೆಸರನ್ನು ಪಂಚತಂತ್ರದಲ್ಲಿ ಸೇರ್ಪಡೆ ಸಹ ಮಾಡಿಲ್ಲ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯ ಮಾಡಲಾಗಿದೆ. ಜಿಪಂಗೆ ಸಲ್ಲಿಸಿದ ಮನವಿಯಲ್ಲಿ ವಿವಿಧ ಬೇಡಿಕೆಗಳನ್ನು ಪ್ರಸ್ತಾಪಿಸಲಾಗಿದೆ.

Sneha Gowda

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

5 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

18 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

33 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

55 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago