ಕಾರವಾರ: ಬಿಜೆಪಿಯ ವಿವಿಧ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶ

ಕಾರವಾರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.18 ರಂದು ಶಕ್ತಿ ಸಂಗಮ ಹೆಸರಿನಲ್ಲಿ ಬಿಜೆಪಿಯ ವಿವಿಧ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಜಿಲ್ಲೆಯಿಂದ 350 ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೀನುಗಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಹೂವಾ ಖಂಡೇಕರ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಒಟ್ಟು 24 ಪ್ರಕೋಷ್ಠಗಳು ಇವೆ. ಪ್ರತೀ ಪ್ರಕೋಷ್ಠದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಹಲವು ಪದಾಧಿಕಾರಿಗಳು ಇರುತ್ತಾರೆ. ಸದ್ಯ ಸಮಾವೇಶಕ್ಕೆ ಪ್ರಕೋಷ್ಠದ ಪದಾಧಿಕಾರಿಗಳು ಮಾತ್ರ ಪಾಲ್ಗೊಳ್ಳುತ್ತಾರೆ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಬಳಿಕ ರಾಜ್ಯ ಮೀನುಗಾರರ ಪ್ರಕೋಷ್ಠದ ನೂತನ ಸದಸ್ಯರ ಪಟ್ಟಿ ಬಿಡುಗಡೆ ಮಾಡಿದರು.

ಜಿಲ್ಲೆಯ ಎಲ್ಲ ಪ್ರಕೋಷ್ಠಗಳ ಸಂಯೋಜಕ ರವಿ ಹೆಗಡೆ ಮಾತನಾಡಿ, ಪ್ರಕೋಷ್ಠದ ಮೂಲಕ ರಾಜ್ಯದ ಬಜೆಟ್‌ನಲ್ಲಿ ಏನು ಸೇರಿಸಬೇಕು ಎನ್ನುವ ಸಲಹೆ ನೀಡುವ ಅವಕಾಶ ಇದೆ. ಸದ್ಯ ಸಮಾವೇಶದಲ್ಲಿ ಪ್ರಕೋಷ್ಠಗಳು ಹೇಗೆ ಕೆಲಸ ಮಾಡಬೇಕು ಎನ್ನುವ ಸಲಹೆ ಸಿಗಲಿದೆ. ಬಳಿಕ ಜಿಲ್ಲೆಯ ಬೇಡಿಕೆ ತಿಳಿದು ಪಟ್ಟಿ ಮಾಡಲಾಗುತ್ತದೆ. ಸರಕಾರ ಮತ್ತು ಜನರ ನಡುವಿನ ಕೊಂಡಿಯಾಗಿ ಪ್ರಕೋಷ್ಠಗಳು ಕೆಲಸ ಮಾಡಲಿವೆ ಎಂದರು. ‘ಶಕ್ತಿ ಸಂಗಮ’ ಸಮಾವೇಶವನ್ನು ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ ಅವರು ಉದ್ಘಾಟನೆ ಮಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ ಕುಮಾರ್ ಕಟೀಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಪಕ್ಷದ ಮುಖಂಡರು ಇರಲಿದ್ದಾರೆ ಎಂದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago