ಕಾರವಾರ: ಹೆಣ್ಣು ಭ್ರೂಣ ಹತ್ಯೆ ತಡೆಯಲು ಎಲ್ಲ ಸಹಕಾರ ಅಗತ್ಯ

ಕಾರವಾರ: ಸಮಾಜದಲ್ಲಿ ಗಂಡು-ಹೆಣ್ಣಿನ ಸಮಾನತೆಯನ್ನು ಕಾಪಾಡಿಕೊಳ್ಳಬೇಕು ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು, ತಂತ್ರಜ್ಞರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ರವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಿ.ಸಿ ಮತ್ತು ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ನಿಷೇಧ ಕಾಯಿದೆ) ಮತ್ತು ಕೆ.ಪಿ.ಎಮ್.ಇ ಕಾಯಿದೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಂತ್ರಜ್ಞಾನದ ದುರ್ಬಳಕೆಯಿಂದ ಭ್ರೂಣ ಲಿಂಗಪಾತವನ್ನು ವಿಕೃತಗೊಳಿಸುವಲ್ಲಿ ಮಹತ್ತರವಾದ ಕಾರಣವಾಗಿದೆ.

ಜಿಲ್ಲೆಯ ಅಲ್ಟ್ರಾಸೌಂಡ್ ಸೌಲಭ್ಯ ಹೊಂದಿರುವ ಎಲ್ಲ ಚಿಕಿತ್ಸಾಲಯಗಳು ಜನೇಟಿಕ್ ಕ್ಲಿನಿಕ್ಗಳು ಹಾಗೂ ಜನೆಟಿಕ್ ಪ್ರಯೋಗಾಲಯಗಳು ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಭ್ರೂಣ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದರೂ ಇಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದವರನ್ನು ಗುರುತಿಸಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆ.ಪಿ.ಎಮ್.ಇ.ಎ ನಡಿ ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ಕಾರ್ಯಾಚರಣೆ ಮಾಡುವ ಅಧಿಕಾರವನ್ನು ತಾಲೂಕಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೆ.ಪಿ.ಎಮ್ಇ ಕಾಯ್ದೆಯ ಅಡಿಯಲ್ಲಿ ಪರವಾನಗಿ ಪಡೆಯದೇ ಚಿಕಿತ್ಸೆ ನೀಡುತ್ತಿರುವವರು ಕೂಡಲೇ ಪರವಾನಗಿ ಪಡೆಯಬೇಕು. ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ವೈದ್ಯ ಪದವಿ ಇಲ್ಲದೇ ಚಿಕಿತ್ಸೆ ನೀಡುವ ನಕಲಿ ವೈದ್ಯರುಗಳ ಕ್ಲಿನಿಕ್ಗಳಿಗೆ ಕಡಿವಾಣ ಹಾಕಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮಾತು ಕು. ಕ ಅಧಿಕಾರಿ ಡಾ. ಶರದ ನಾಯ್ಕ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಅನ್ನಪೂರ್ಣ ವಸ್ತ್ರದ ಹಾಗೂ ಜಿಲ್ಲಾಮಟ್ಟದ ಆರೋಗ್ಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

5 mins ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

28 mins ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

40 mins ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

48 mins ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

2 hours ago

ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

2 hours ago