ಕಾರವಾರ: ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಿಯ ರಾಷ್ಟ್ರೀಯ ಹೆದ್ದಾರಿ 63 ಶಾಲಾ ಬಸ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯವಾಗಿದೆ.
ಹುಬ್ಬಳ್ಳಿ ಕಟೆಯಿಂದ ಅಂಕೋಲಾ ಕಡೆಗೆ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಶಾಲಾ ಬಸ್ ಕೆಟ್ಟು ನಿಂತ ಲಾರಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದೆ. ಬಸ್ನಲ್ಲಿನ 12 ಕ್ಕೂ ಹೆಚ್ಚಿನ ಜನರಿಗೆ ಸಣ್ಣಪುಟ್ಟ ಗಾಯವಾಗಿದೆ.
ಗಾಯಾಳುಗಳನ್ನು ಯಲ್ಲಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.