ಕಾರವಾರ: ಈ ಸಲ ಕಾಂಗ್ರೆಸ್ ಗೆಲವು ಖಚಿತ- ಸತೀಶ್ ಸೈಲ್

ಕಾರವಾರ: ಬಡವರ, ದೀನದಲಿತರ ಪರವಾಗಿರುವ ಕಾಂಗ್ರೆಸ್ ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರ ಹಿಡಿಯಲಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಗೃಹಲಕ್ಷ್ಮಿ ಯೋಜನೆಯಡಿ ಎರಡು ಸಾವಿರ, 200 ಯೂನಿಟ್ ಉಚಿತ ವಿದ್ಯುತ್, ಹತ್ತು ಕೆ.ಜಿ. ಅಕ್ಕಿ, ಪದವಿ ಪೂರ್ಣಗೊಳಿಸಿದವರಿಗೆ 2 ವರ್ಷದ ವರೆಗೆ 3000 ರೂಪಾಯಿ ಪ್ರೋತ್ಸಾಹದ ನೀಡುವ ಗ್ಯಾರಂಟಿ ಸ್ಕೀಮ್ ಗಳನ್ನು ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದು, ಇದು ಜನಪರ ಯೋಜನೆಳಗಾಗಿವೆ ಎಂದರು.

ಯುಪಿಎ ಸರ್ಕಾರ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ದರ 450 ರೂ. ಇತ್ತು. ಈಗ 1200 ರೂಪಾಯಿ ಆಗಿದೆ. ಕಾಂಗ್ರೆಸ್ ಗ್ಯಾರಂಟಿ ಸ್ಕೀಮ್ನಡಿ ಮಹಿಳೆಯರಿಗೆ 2000 ನೀಡುವುದರಿಂದ ಕನಿಷ್ಠ ಗ್ಯಾಸ್ ಸಿಲಿಂಡರ್ ಖರ್ಚು ಸರಿದೂಗಿಸಬಹುದಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಜಲ ವಿದ್ಯುತ್ ಯೋಜನೆಗಳು, ಕೈಗಾ ಅಣುವಿದ್ಯುತ್ ಸ್ಥಾವರಗಳಿದ್ದರೂ ಯೋಜನೆಗಳಿಂದ ಬಾಧಿತರಾದವರಿಗೆ ಉಚಿತ ವಿದ್ಯುತ್ ದೊರೆಯುತ್ತಿಲ್ಲ. ಎಲ್ಲವನ್ನೂ ನಾವು ಹಣಕೊಟ್ಟೇ ಪಡೆಯಬೇಕಾಗಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಎಲ್ಲರಿಗೂ 200 ಯೂನಿಟ್ ಉಚಿತ್ ವಿದ್ಯುತ್ ನೀಡುವ ತೀರ್ಮಾನ ಕೈಗೊಂಡಿದೆ ಎಂದು ಸೈಲ್ ತಿಳಿಸಿದರು.

ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 3000 ರೂಪಾಯಿ ಪ್ರೋತ್ಸಾಹ ಧನ ನೀಡಲು ಸರ್ಕಾರ ನಿರ್ಧರಿಸಿದೆ. ಪದವಿ ಮುಗಿದ ತಕ್ಷಣ ಉದ್ಯೋಗ ಅರಸಿ ದೊಡ್ಡ ದೊಡ್ಡ ನಗರಗಳಿಗೆ ಹೋಗುವ ಯುವಕ, ಯುವತಿಯರಿಗೆ ಇದು ನೆರವಾಗಲಿದೆ. ಈ ಹಣ ಪಡೆಯುವ ಮೂಲಕ ಕಂಪ್ಯೂಟರ್ ಸೇರಿದಂತೆ ವೃತ್ತಿ ಆಧಾರಿತ ತರಬೇತಿಗಳಿಗೆ ಫಿ ಪಾವತಿಸಬಹುದಾಗಿದೆ ಎಂದು ಮಾಜಿ ಶಾಸಕರು ನುಡಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ವಿರೋಧ ಪಕ್ಷದವರು ಹ್ಯಾಸ ಮಾಡಿದ್ದರು. ಆದರೆ, ಪಕ್ಷದ ನಾಯಕ ಸುರ್ಜೆವಾಲ ಅವರು ಈ ಗ್ಯಾರಂಟಿ ಕಾರ್ಡ್ಗಳನ್ನು ಬಜೆಟ್ನಲ್ಲಿ ಘೋಷಣೆ ಮಾಡುವುದಾಗಿ ಭರವಸೆ ನೀಡಿದ ಬಳಿಕ ವಿರೋಧ ಪಕ್ಷದವರು ಸುಮ್ಮನಾಗಿದ್ದಾರೆ ಎಂದರು. ಮುಡಗೇರಿಯಲ್ಲಿ ಕೈಗಾರಿಕೆಗಾಗಿ ಭೂಸ್ವಾಧೀನ ಪಡಿಸಿಕೊಂಡ ರೈತರಿಗೆ ಪರಿಹಾದ ಚೆಕ್ ನೀಡಲಾಗಿದೆ. ಹಾದರೆ, ಹಣ ಇದುವರೆಗೆ ರೈತರ ಖಾತೆ ಜಮೆ ಆಗಿಲ್ಲ. ಕ್ರಿಕೆಟ್ ಪಂದ್ಯಗಳಲ್ಲಿ ವಿಜೇತರಿಗೆ ನೀಡುವ ದೊಡ್ಡದಾಗಿರುವ ಮಾದರಿ ಚೆಕ್ ನೀಡುವ ಮೂಲಕ ಬಿಜೆಪಿ ಸರ್ಕಾರ ಜಮೀನು ಕಳೆದುಕೊಂಡ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.

ಕಾಂಗ್ರೆಸ್ ಸೇರ್ಪಡೆಗೊಂಡ ರಾಘು ನಾಯ್ಕ ಮಾತನಾಡಿ, ಸತೀಶ್ ಸೈಲ್ ಅವರು ಅಹಂಕಾರವಿಲ್ಲದ ವ್ಯಕ್ತಿ. ಎಲ್ಲರನ್ನೂ ಸಮಾನವಾಗಿ ಕರೆದುಕೊಂಡು ಹೋಗುವ ವ್ಯಕ್ತಿ. ಅವರ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷದ ಸೇರ್ಪಡೆಯಾಗಿದ್ದೇವೆ ಎಂದರು.

ಮುಂಬರುವ ಮೇ 5ರೊಳಗೆ ದೊಡ್ಡ ಕಾರ್ಯಕ್ರಮವೊಂದನ್ನು ಮಾಡಿ ಇನ್ನಷ್ಟು ಜನ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮವಿದೆ. ಮುಂಬರುವ ಚುನಾವಣೆಯಲಿ ಅವರು 25ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಕ್ಷೇತ್ರದಲ್ಲಿರುವ ಸೀಬಡ್ ನೌಕಾನೆಲೆ ಯೋಜನೆ, ಕೈಗಾ ಯೋಜನಾ ಪ್ರದೇಶಗಳಲ್ಲಿ ಬಿಹಾರ, ಉತ್ತರ ಪ್ರದೇಶದ ಸೇರಿದಂತೆ ಹೊರಗಿನ ರಾಜ್ಯದ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಓಡಿಸಿ ಸ್ಥಳೀಯರಿಗೆ ಅಲ್ಲಿ ಅವಕಾಶ ಕಲ್ಪಿಸಲು ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳು ಸೈಲ್ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು.

ಕ್ಷೇತ್ರದ ವೀಕ್ಷಕರಾಗಿ ಬಂದಿರುವ ಛತ್ತಿಸಘಡ ರಾಜ್ಯದ ರಾಯಾಪುರ ಕ್ಷೇತ್ರದ ಶಾಸಕ ವಿಕಾಸ ಉಪಾಧ್ಯಾಯ, ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಜೆ.ಡಿ.ನಾಯ್ಕ, ಭಾಸ್ಕರ ಪಟಗಾರ, ಪ್ರಭಾಕರ ಮಾಳ್ಸೆಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯಕ, ಗುರು, ಮಾರುತಿ ನಾಯ್ಕ, ಶ್ಯಾಮ, ದೇವಿದಾಸ, ಜನಾರ್ಧನ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago