ಕಾರವಾರ: ಕಲಕೇರಿ ಹಾಗೂ ಅಂದಲಗಿ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ ಚಾಲನೆ

ಕಾರವಾರ: ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ನರೇಗಾದಡಿ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಏಕಕಾಲದಲ್ಲಿ ಎರಡು ಹೊಸ ಕೆರೆಗಳ ನಿರ್ಮಾಣಕ್ಕೆ ನಾಗನೂರು ಪಂಚಾಯತ್ ಮುಂದಾಗಿದೆ.

ಮುಂಡಗೋಡ ತಾಲೂಕಿನ ನಾಗನೂರು ಪಂಚಾಯತ್‌ನ ಕಲಕೇರಿ ಹಾಗೂ ಅಂದಲಗಿ ಗ್ರಾಮದಲ್ಲಿ ಅಂದಾಜು ೩ ಲಕ್ಷ ವೆಚ್ಚದಲ್ಲಿ ಹೊಸ ಕೆರೆ ನಿರ್ಮಿಸಲಾಗುತ್ತಿದ್ದು, ಸುಮಾರು ೧೨೦ ಕೂಲಿಕಾರರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.

೨೦೨೨-೨೩ನೇ ಸಾಲಿನಲ್ಲಿ ಒಟ್ಟು ೨೭ ಹೊಸ ಕೆರೆ ನಿರ್ಮಾಣಕ್ಕೆ ಬೇಡಿಕೆಯಿದ್ದು, ಪ್ರಸ್ತುತ ೨ ಕೆರೆಗಳ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಎಲ್ಲ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸೋಮನಿಂಗಪ್ಪಛಬ್ಬಿ ಮಾತನಾಡಿ, ನರೇಗಾದಡಿ ಕೆಲಸ ಮಾಡುವ ಕೂಲಿಕಾರರಿಗೆ ಅನುಕೂಲವಾಗುವ ಉದ್ದೇಶದಿಂದ ಕಾಮಗಾರಿ ಸ್ಥಳದಲ್ಲಿಯೇ ಹೆಸರು ನೊಂದಾಯಿಸಲಾಗುತ್ತದೆ. ಅಲ್ಲದೇ ನರೇಗಾದಡಿ ಲಭ್ಯವಿರುವ ಕಾಮಗಾರಿಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳನ್ನು ಪಂಚಾಯತ್‌ಗೆ ಒದಗಿಸುವಂತೆ ತಿಳಿಸಲಾಗುತ್ತಿದೆ.

ಜೊತೆಗೆ ಯಾವುದೇ ಕೂಲಿಕಾರರು ದುಡಿಮೆಯಿಂದ ವಂಚಿತರಾಗದAತೆ ಕ್ರಮ ವಹಿಸಲಾಗುತ್ತಿದೆ. ಕೂಲಿಯಿಂದ ವಂಚಿತರಾದ ಕೂಲಿಕಾರರಿಗೆ ಸಕಾಲದಲ್ಲಿ ಕೆಲಸ ನೀಡಲು ಶ್ರಮಿಸಲಾಗುತ್ತಿದೆ ಎಂದರು.

ಕಲಕೇರಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರೇ ಇರುವುದರಿಂದ ಸುತ್ತಲಿನ ಅರಣ್ಯ ಕಾಮಗಾರಿಗಳಿಗೆ ಭಾರಿ ಬೇಡಿಕೆಯಿದೆ. ಹೀಗಾಗಿ ಕೂಲಿಕಾರರಿಗೆ ನರೇಗಾದಡಿ ಲಭ್ಯವಿರುವ ಅನುಕೂಲತೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ, ಪಂಚಾಯತ್ ಕಾರ್ಯದರ್ಶಿ ಮೋಹನ್, ಬಿಎಫ್‌ಟಿ ಹನುಮಂತಇಡಗೋಡ, ಪಂಚಾಯತ್ ಸಿಬ್ಬಂದಿ ಸಂದೇಶ, ಮೇಟ್ ಮತ್ತಿತರರು ಇದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago