News Karnataka Kannada
Sunday, April 28 2024
ಉತ್ತರಕನ್ನಡ

ಕಾರವಾರ| ಮಳೆಗಾಲದಲ್ಲಿ ಅನಾಹುತಕ್ಕೆ ಕಾರಣರಾದವರ ಮೇಲೆ ಕ್ರಿಮಿನಲ್ ಕೇಸ್: ಕೋಟ ಶ್ರೀನಿವಾಸ್ ಪೂಜಾರಿ 

Action taken to press for inclusion of Halakki, Kunbi and Gowli communities in scheduled tribe category
Photo Credit :

ಕಾರವಾರ: ಮಳೆಗಾಲದ  ಸಂದರ್ಭದಲ್ಲಿ ಅನಾಹುತಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಐಆರ್‌ಬಿ ಅವೈಜ್ಞಾನಿಕ ಕಾಮಗಾರಿ ಹಾಗೂ ಸೀಬರ್ಡ್ ನೌಕಾನೆಲೆ ಯೋಜನೆಯಿಂದಾಗಿ ಚೆಂಡಿಯಾ, ಅರಗಾ ಮತ್ತು ಮುದಗಾದಲ್ಲಿ ಕೃತಕ ನೆರೆ ಸೃಷ್ಟಿಯಾಗುತ್ತಿದೆ. ಈ ಬಗ್ಗೆ ಜು.೧೧ರಂದು ಸಭೆ ನಡೆಸಲಾಗುವುದು ಎಂದರು.

ಜಿಲ್ಲೆಯ ಸಂಸದರು, ಶಾಸಕರು, ಕದಂಬ ನೌಕಾನೆಲೆ, ರಾಷ್ಟ್ರೀಯ ಹೆದ್ದಾರಿ, ಐಆರ್‌ಬಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಪ್ರತಿ ಮಳೆಗಾಲದಲ್ಲಿ ಅಲ್ಲಿ ಕಂಡು ಬರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಮಳೆಯ ನೀರು ಸರಿಯಾಗಿ ಹರಿದು ಹೋಗದ ಜನವಸತಿ ಪ್ರದೇಶದಲ್ಲಿ ಸಂಗ್ರವಾಗುತ್ತಿರುವ ಬಗ್ಗೆ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ ನೌಕಾನೆಲೆಯ ಅಧಿಕಾರಿಗಳೊಂದಿಗೆ ಈಗಾಗಲೇ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ, ತಾತ್ಕಾಲಿಕ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು. ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಹೊನ್ನಾವರ, ಕುಮಟಾ ಮತ್ತು ಕಾರವಾರದಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ೩೩ ಮಂದಿ ಗಂಜಿ ಕೇಂದ್ರಗಳಲ್ಲಿ ಉಳಿದುಕೊಂಡಿದ್ದಾರೆ ಎಂದು ಉಸ್ತುವಾರಿ ಸಚಿವರು ಮಾಹಿತಿ ನೀಡಿದರು.

ಕಡಲತೀರದಲ್ಲಿ ದೊಡ್ಡ ಕಲ್ಲುಗಳನ್ನು ಹಾಕುವುದು ಕಡಲಕೊರತಕ್ಕೆ ಪರಿಹಾರ ಅಲ್ಲ ಎನ್ನುವುದು ಗೊತ್ತಾಗಿದೆ. ಈ ಕಾರಣದಿಂದಾಗಿಕಡಲಕೊರತೆ ತಡೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ  ಮಾಡಲಾಗುತ್ತಿದೆ. ಪ್ರಾಯೋಗಿಕವಾಗಿ ಕೆಲವು ಕಡಲತೀರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆದರೆ, ಕಡಲಕೊರೆತೆ ಉಂಟಾದ ಸಂದರ್ಭದಲ್ಲಿ ಸಾರ್ವಜನಿಕರು ಶೀಘಗತಿಯಲ್ಲ ತಡೆಗೋಡೆ ನಿರ್ಮಿಸಲು ಒತ್ತಡ ಹೇರುವುದರಿಂದ ದೊಡ್ಡ ಕಲ್ಲುಗಳನ್ನು ತಂದು ಹಾಕುವುದ ಅನಿವಾರ್ಯವಾಗಿದೆ. ಮುಂದಿನ ದಿನಗಳಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು ಎಂದರು.

ಮಳೆಯ ಹಿನ್ನೆಲೆಯಲ್ಲಿ ಪ್ರವಾಹದ  ಮುನ್ನಚ್ಚರಿಕೆಯಿಂದಾಗಿ ೨೨೯ ಗ್ರಾಮ ಪಂಚಾಯಿತಿಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಆಯಾ ಗ್ರಾಮ  ಪಂಚಾಯಿತಿಗಳಲ್ಲಿ ನೆಲೆಸಿ ವರದಿ ಮಾಡಲು ಸೂಚನೆ ನೀಡಲಾಗಿದೆ ಎಂದರು. ಅಣಶಿ ಘಟ್ಟದಲ್ಲಿ ರಸ್ತೆ ದುರಸ್ತಿ ಮಾಡಲು ಅನುದಾನ ಕೊರತೆ ಇಲ್ಲ. ಎಲ್ಲಿ ತೊಂದರೆ ಆಗಿದೆಯೋ ಅಲ್ಲಿ ವ್ಯವಸ್ಥೆಗಳನ್ನು ತಕ್ಷಣವೇ ಸರಿಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲಾಧಿಕಾರಿ ಮುಲ್ಲೆ ಮುಹಿಲನ್ ಮಾತನಾಡಿ, ಎಸ್‌ಡಿಆರ್‌ಎಫ್ ಎರಡು ತಂಡಗಳು ಜಿಲ್ಲೆಯಲ್ಲಿವೆ. ಒಂದು ಕುಮಟಾ ಮತ್ತು ಇನ್ನೊಂದು ತಂಡ ಅಂಕೋಲಾ ಭಾಗದಲ್ಲಿ ಕಾರ್ಯನಿರ್ವಹಿಸಲು ಸನ್ನಧವಾಗಿದೆ ಎಂದರು. ಇನ್ನಷ್ಟು ತಂಡಗಳನ್ನು ಜಿಲ್ಲೆಗೆ ಕಳುಹಿಸುವಂತೆ ಕಂದಾಯ ಇಲಾಖೆಯ ಕಾರ್ಯದರ್ಶಿಯವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಮಾಡಿಕೊಂಡಿದ್ದಾರೆ. ಕಳುಹಿಸಿ ಕೊಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು. ಶಾಸಕಿ ರೂಪಾಲಿ ನಾಯ್ಕ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು