ಕಾರವಾರ: ಮಹಿಳೆ ಸುರಕ್ಷಿತ ಎನ್ನುವ ಸಂದೇಶ ಸಾರಲು ಸೈಕಲ್ ಯಾತ್ರೆ

ಕಾರವಾರ: ಮಹಿಳೆಯರು ಸುರಕ್ಷಿತವಾಗಿದ್ದಾರೆ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಬೇಕು ಎನ್ನುವ ಗುರಿಯೊಂದಿಗೆ ಯುವತಿಯೊಬ್ಬಳು ಒಬ್ಬಂಟಿಯಾಗಿ ಸೈಕಲ್ ಯಾತ್ರೆ ಆರಂಭಿಸಿ ರವಿವಾರ ಗೋವಾ ಮಾರ್ಗವಾಗಿ ಆಗಮಿಸಿ ಕಾರವಾರಕ್ಕೆ ತಲುದ್ದಾಳೆ.

ಮಧ್ಯಪ್ರದೇಶದ ರಾಜಗಢ ಜಿಲ್ಲೆಯ ಆಶಾ ಮಾಲ್ವಿ ಒಬ್ಬಂಟಿಯಾಗಿ ಸೈಕಲ್ ಯಾತ್ರೆ ಕೈಗೊಂಡಿದ್ದು, ಈ ಮೂಲಕ ಭಾರತ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎನ್ನುವುದನ್ನು ನಿರೂಪಿಸಲು ಭಾರತ ಸೈಕಲ್ ಯಾತ್ರೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನಿಂದ ನ. ೧ ರಿಂದ ಯಾತ್ರೆ ಆರಂಭಿಸಿರುವ ಯುವತಿ ೨೦ ಸಾವಿರ ಕಿ.ಮೀ ಸೈಕಲ್ ಮೂಲಕ ಪ್ರಯಾಣಿಸುವ ಗುರಿ ಹೊಂದಿದ್ದಾಳೆ.

ಈಗಾಗಲೇ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟç ಹಾಗೂ ಗೋವಾ ಮಾರ್ಗವಾಗಿ ೩೭ ಸಾವಿರ ಕಿ.ಮೀ ಕ್ರಮಿಸಿ ಕರ್ನಾಟಕದ ಕಾರವಾರ ಪ್ರವೇಶಿಸಿದ್ದಾಳೆ. ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಂದಾಗಿ ಮಹಿಳೆಯರಿಗೆ ದೇಶದಲ್ಲಿ ಸುರಕ್ಷತೆಯಿಲ್ಲ ಎನ್ನುವ ಅಭಿಪ್ರಾಯ ಮೂಡಿದೆ. ಆದರೆ ಇಲ್ಲಿನ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಬೇಕು ಎನ್ನುವ ಗುರಿಯೊಂದಿಗೆ ಸೈಕಲ್ ಯಾತ್ರೆ ಕೈಗೊಂಡಿರುವುದಾಗಿ ಆಶಾ ಮಾಲ್ವಿ ತಿಳಿಸಿದರು. ಪ್ರತಿನಿತ್ಯ ಯಾವ ಸ್ಥಳಕ್ಕೆ ತೆರಳಬೇಕು ಎನ್ನುವ ಗುರಿಯೊಂದಿಗೆ ಸುಮಾರು ೭೦ ರಿಂದ ೧೫೦ ಕಿ.ಮೀ ವರೆಗೆ ಸೈಕಲ್ ತುಳಿಯುತ್ತೇನೆ. ಬಳಿಕ ಅಲ್ಲಿನ ಯಾತ್ರಿ ನಿವಾಸಗಳಲ್ಲಿ ವಸತಿ ಮಾಡಿ ಪ್ರಯಾಣ ಮುಂದುವರಿಸುತ್ತೇನೆ.

ಊಟ ತಿಂಡಿ ಎಲ್ಲವೂ ಸ್ವಂತ ಕರ್ಚಿನಲ್ಲಿ ಮಾಡುತ್ತಿದ್ದರು, ಕೆಲವರು ಧನಸಹಾಯ ಮಾಡಿದ್ದಾರೆ. ಹೀಗೆ ತೆರಳುವಾಗ ಶಾಲಾ ಕಾಲೇಜುಗಳಿಗೆ ತೆರಳಿ ದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿರುವ ಬಗ್ಗೆ ಮತ್ತು ಮಹಿಳೆಯರ ರಕ್ಷಣೆ ಬಗ್ಗೆ ಭಾರತ ಹೊಂದಿರುವ ಕಾಳಜಿ ಬಗ್ಗೆ ಮಾಹಿತಿ ನೀಡುತ್ತಿರುವುದಾಗಿ ತಿಳಿಸಿದರು. ಇನ್ನು ಯಾತ್ರೆಯನ್ನು ದೆಹಲಿಯಲ್ಲಿ ಪೂರ್ಣಗೊಳಿಸಲಿದ್ದು, ಯಾತ್ರೆ ಪೂರ್ಣಗೊಳ್ಳುವ ಸಂದರ್ಭದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಬೇಕೆಂಬ ಬಯಕೆ ಇದೆ ಎಂದು ಆಶಾ ಮಾಲ್ವಿ ತಿಳಿಸಿದ್ದಾರೆ.

Gayathri SG

Recent Posts

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

11 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

30 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

34 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

44 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

54 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

1 hour ago