ಕಾರವಾರ: ಸುಳ್ಳು ದಾಖಲೆ ನೀಡಿ ಕಟ್ಟಡ ನಿರ್ಮಾಣ- ಕ್ರಮಕ್ಕೆ ಆಗ್ರಹ

ಕಾರವಾರ: ರಸ್ತೆ ಇದೆ ಎಂದು ಸುಳ್ಳು ದಾಖಲೆ ನೀಡಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಿರುವುದರ ಕುರಿತು ನಗರಸಭೆಗೆ ದೂರು ನೀಡಿದರೂ ಪ್ರಯೋಜನವಾಗದೇ ನ್ಯಾಯಾಲಯದ ಮೂಲಕ ನ್ಯಾಯ ದೊರಕಿಸಿಕೊಳ್ಳಬೇಕಾಗಿರುವ ಅನಿವಾರ್ಯತೆ ಎದುರಾಗಿರುವುದು ದುರದೃಷ್ಟ ಎಂದು ಕರುನಾಡು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎನ್. ದತ್ತಾ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ನಗರದ ಸಾಯಿಕಟ್ಟಾದಲ್ಲಿ ಓರ್ವರು ೩ ಗುಂಟೆ ೯ ಆಣೆ ಜಾಗವನ್ನು ಖರೀದಿಸಿದ್ದು ಅದರಲ್ಲಿ ೯ ಆಣೆ ಜಾಗವನ್ನು ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯನ್ನಾಗಿ ತೋರಿಸಿ ಎನ್.ಎ. ಮಾಡಿಕೊಂಡಿದ್ದಾರೆ. ಬಳಿಕ ನಗರಸಭೆ, ಕೆ.ಡಿ.ಎ. ಯಿಂದ ಅನುಮತಿ ಪಡೆದು ಬಹುಮಹಡಿ ಕಟ್ಟಡದ ಕಾಮಗಾರಿ ಆರಂಭಿಸಿದ್ದಾರೆ.

ಆದರೆ ಇದಕ್ಕೆ ಸಂಪರ್ಕ ರಸ್ತೆ ಇಲ್ಲದಿದ್ದರೂ ಬಹುಮಹಡಿ ಕಟ್ಟಡ ನಿಮಾಣವಾಗುತ್ತಿರುವುದನ್ನು ಗಮನಿಸಿ ಸ್ಥಳೀಯರು ಮಾಹಿತಿ ಹಕ್ಕಿನಲ್ಲಿ ಮಾಹಿತಿ ಪಡೆದಾಗ ಸ್ಥಳೀಯರು ಕಾಲುದಾರಿಗೆಂದು ಬಳಸುತ್ತಿದ್ದ ೭ ಅಡಿ ರಸ್ತೆಯನ್ನೇ ೯ ಮೀಟರ್ ರಸ್ತೆ ಇದೆ ಎಂದು ತೋರಿಸಿ ಎನ್.ಎ. ಜಾಗವನ್ನು ಎನ್.ಎ. ಮಾಡಿಕೊಂಡಿರುವುದು ಬಹಿರಂಗಗೊಂಡಿದೆ. ನಿಯಮದ ಪ್ರಕಾರ ೧೪ ಅಡಿ ರಸ್ತೆ ಇರಬೇಕಿದ್ದರೂ ೭ ಅಡಿ ರಸ್ತೆಯನ್ನೇ ೯ ಮೀ. ಇದೆ ಎಂದು ಹೇಳಿದಾಗ ನಗರಸಭೆ, ಕೆಡಿಎ ದವರು ಸ್ಥಳ ಪರಿಶೀಲನೆ ನಡೆಸಬೇಕಿತ್ತು. ಆದರೆ ಇದನ್ನು ಮಾಡದೇ ಅನುಮತಿ ನೀಡಿರುವುದರಿಂದ ತಕ್ಷಣ ಸ್ಥಳೀಯರು ಈ ಬಗ್ಗೆ ನಗರಸಭೆಗೆ, ಕೆಡಿಎ, ಜನಪ್ರತಿನಿಧಿಗಳು ಹಾಗೂ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದ್ದಾರೆ.

ಆದರೆ ಈ ಬಗ್ಗೆ ಅವರ ಉತ್ತರ ಬರುವ ಮುನ್ನವೇ ಕಟ್ಟಡ ಕಾಮಗಾರಿ ಮುಗಿದಿತ್ತು ಎಂದು ಆರೋಪಿಸಿದರು. ಈ ಬಗ್ಗೆ ನ್ಯಾಯ ದೊರೆಯದ ಕಾರಣ ಸ್ಥಳೀಯರು ವಕೀಲರ ಮೂಲಕ ನ್ಯಾಯಾಲಯದ ಮೊರೆ ಹೋದರು. ನ್ಯಾಯಾಲಯವು ಈ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೆ ನೋಟೀಸ್ ಜಾರಿ ಮಾಡಿತು. ಆದರೂ ಈ ಬಗ್ಗೆ ಕ್ರಮವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಕಟ್ಟಡ ಮಾಲೀಕರಿಗೆ ಆ ರಸ್ತೆಯನ್ನು ಬಳಸದಂತೆ ತಡೆಯಾಜ್ಞೆ ನೀಡಿದ್ದು ಅಲ್ಪ ಪ್ರಮಾಣದ ಜಯ ಅವರಿಗೆ ದೊರೆತಿದೆ ಎಂದು ತಿಳಿಸಿದರು.

ತಮ್ಮ ಸಮಸ್ಯೆಗಳ ಬಗ್ಗೆ ಸ್ಥಳೀಯ ಸಂಸ್ಥೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯಬೇಕಾದ ಸ್ಥಿತಿ ಜನರದ್ದಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನವಹಿಸಬೇಕು. ಈ ಹಿಂದೆ ನಗರದಲ್ಲಿ ೩೧ ಬಹುಮಹಡಿ ಕಟ್ಟಡಗಳು ನಕ್ಷೆಯ ವ್ಯತಿರಿಕ್ತವಾಗಿ ನಿರ್ಮಿಸಲಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇದೀಗ ಈ ಸಂಖ್ಯೆ ೧೦೦ಕ್ಕೂ ಹೆಚ್ಚು ತಲುಪಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕೆಲವು ಜನಪ್ರತಿನಿಧಿಗಳ ಕೈವಾಡ ಇದೆ ಎಂದು ಆರೋಪಿಸಿದರು.

ಆದೇಶದಂತೆ ೧೬ ಮೀ. ಗಿಂತ ಎತ್ತರ ಕಟ್ಟಡ ನಿರ್ಮಿಸದಂತೆ ತಿಳಿಸಲಾಗಿದ್ದರೂ ೨೦ ಮೀ. ಗಿಂತ ಎತ್ತರದ ಕಟ್ಟಡಗಳ ನಿರ್ಮಾಣವಾಗುತ್ತಿವೆ. ಪಾರ್ಕಿಂಗ್ ಜಾಗವನ್ನು ಮೊದಲು ತೋರಿಸಲಾಗುತ್ತದಾದರೂ ಬಳಿಕ ಆ ಜಾಗದಲ್ಲಿ ಅಂಗಡಿಗಳು, ವಸತಿ ಗೃಹಗಳ ನಿರ್ಮಾಣವಾಗುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ನಗರದ ಸಾಯಿಕಟ್ಟಾದ ರಹವಾಸಿಗಳಾದ ದಿನೇಶ ನಾಯ್ಕ, ಮೋಹನ ನಾಯ್ಕ, ಮಹಾದೇವ ನಾಯ್ಕ, ನಾರಾಯಣ ನಾಯ್ಕ ಇದ್ದರು.

Sneha Gowda

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

7 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

25 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

48 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago