ಕಾರವಾರ: ವಿಶೇಷ ಗ್ರಾಮ ಸಭೆಯಲ್ಲಿ ಶಾಲಾ ಅಭಿವೃದ್ದಿ ಕಾಮಗಾರಿಗಳಿಗೆ ಬೇಡಿಕೆ

ಕಾರವಾರ: ಶಿರಸಿ ತಾಲೂಕಿನ ಇಸಳೂರು ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳು ಮತ್ತು ಮಹಿಳಾ ವಿಶೇಷ ಗ್ರಾಮ ಸಭೆ ನಡೆಸಿ ಅವರ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಪಂಚಾಯತ್ ಪ್ರತಿನಿಧಿಗಳ ಸಮ್ಮುಖದಲ್ಲಿ ಚರ್ಚಿಸಲಾಯಿತು.

ಮಂಗಳವಾರ ನಡೆದ ಸಭೆಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ತಾಲೂಕು ಐಇಸಿ ಸಂಯೋಜಕರು ಖಾತರಿ ಯೋಜನೆಯಡಿ ಸಿಗುವ ಸೌಲಭ್ಯಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಯೋಜನೆಯ ಸದುಪಯೋಗದ ಕುರಿತು ಮಾಹಿತಿ ನೀಡಿದರು.

ಇನ್ನು ಅಪೌಷ್ಠಿಕತೆ ಹೋಗಲಾಡಿಸುವ ದೃಷ್ಠಿಯಿಂದ ಶಾಲೆಗಳಿಗೆ ಹಾಗೂ ವೈಯಕ್ತಿಕವಾಗಿ ಪೌಷ್ಟಿಕ ಕೈತೋಟ ನೀಡಲಾಗುತ್ತಿದೆ ಅದರ ಸದುಪಯೋಗ ಪ್ರತಿಯೊಬ್ಬರು ಪಡೆಯಬೇಕೆಂದು ತಿಳಿಸಿದರು. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಆಹಾರ ಸುರಕ್ಷತೆ, ಮಹಿಳೆ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ತಡೆಯಲು ಅನುಸರಿಸಬೇಕಾದ ಕ್ರಮಗಳು, ಹಾಗೂ ಎನ್‌ಆರ್‌ಎಲ್‌ಎಮ್ ಒಕ್ಕೂಟದ ಕುರಿತು ಪರಿಣಿತರು ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಭಟ್, ಉಪಾಧ್ಯಕ್ಷ ಪ್ರಸನ್ನ ಹೆಗಡೆ ಹಾಗೂ ಸದಸ್ಯರು, ಪಂಚಾಯತ್ ಅಭಿವೃದ್ದಿ ಗೋಪಾಲ ಪಟಗಾರ್, ಕಾರ್ಯದರ್ಶಿ ವೆಂಕಟ್ರಮಣ ಶೆಟ್ಟಿ, ಐಇಸಿ ಸಂಯೋಜಕರಾದ ಪೂರ್ಣಿಮಾ ಗೌಡ, ಎನ್‌ಆರ್‌ಎಲ್‌ಎಮ್ ವಲಯ ಮೇಲ್ವಿಚಾರಕರಾದ ರಾಮಣ್ಣ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಎಮ್‌ಬಿಕೆ, ಪಂಚಾಯತ್ ಸಿಬ್ಬಂದಿಗಳು, ವೈದ್ಯಾಧಿಕಾರಿಗಳು, ನೂಡಲ್ ಅಧಿಕಾರಿ, ಸ್ವಸಹಾಯ ಸಂಘದವರು, ಹಾಗೂ ಊರ ನಾಗರಿಕರು ಇದ್ದರು.

Sushma K

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

2 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

39 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

42 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

56 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

56 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago