News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಜಿಲ್ಲಾಧಿಕಾರಿಯಿಂದ ಶೋಕಾಸ್ ನೋಟಿಸ್ ಜಾರಿ

Karwar: Deputy Commissioner issues show cause notice
Photo Credit : By Author

ಕಾರವಾರ: ಅಂಕೋಲಾದ ಸರಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಡಿಸಿ ಕ್ರಮ ಕೈಗೊಳ್ಳುತ್ತಿದ್ದು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ರಾಮನಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಳಿಕಟ್ಟಿ ಅವರು ಭೇಟಿ ನೀಡಿದಾಗ ವೈದ್ಯರಿಗೆ, ಸಿಬ್ಬಂದಿ ಕೆಲಸದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಅಂಕೋಲಾ ತಾಲೂಕಾ ವೈದ್ಯಾಧಿಕಾರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ತಾಲೂಕು ಮಟ್ಟದ ಅಧಿಕಾರಿಯಾಗಿ ನಿಮ್ಮ ಅಧೀನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಖಚಿತಪಡಿಸಕೊಳ್ಳದೇ ನೀವು ಕರ್ತವ್ಯಲೋಪ ಎಸಗಿದ್ದೀರಿ. ಮುಂದಿನ 3 ದಿನದೊಳಗಾಗಿ ಜಿಲ್ಲಾಧಿಕಾರಿ ಎದುರು ಹಾಜರಾಗಿ ಲಿಖಿತ ಕಾರಣ ನೀಡಬೇಕು. ಇಲ್ಲದಿದ್ದಲ್ಲಿ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು