ಕಾರವಾರ: ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಧರಣಿ

ಕಾರವಾರ: ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಅವರ ನೇತೃತ್ವದಲ್ಲಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಬೆಳಿಗ್ಗೆ ನೂರಾರು ಸಂಖ್ಯೆಯಲ್ಲಿ ಸೇರಿದ ಜಿಲ್ಲೆಯ ವಿವಿಧ ಭಾಗಗಳ ಹಾಲಕ್ಕಿ ಸಮುದಾಯದವರು ಹಾಗೂ ಇತರ ಸಮುದಾಯದವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಅವುಗಳನ್ನು ಬಗೆಹರಿಸುವಂತೆ ಘೋಷಣೆ ಹಾಕಿದರು.

ಪದ್ಮಶ್ರೀ ಪುರಷ್ಕೃತ ಅಂಕೋಲಾ ತಾಲೂಕಿನ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಅವರ ಮುಂದಾಳತ್ವದಲ್ಲಿ ಈ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರವಾರ, ಅಂಕೋಲಾ, ಕುಮಟಾ ಭಾಗದ ಹಾಲಕ್ಕಿ ಒಕ್ಕಲ ಸಮುದಾಯದ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಮನವಿ ಪತ್ರ ಸ್ವೀಕರಿಸಿದರು. ಸುಕ್ರಿ ಗೌಡ (ಸುಕ್ರಜ್ಜಿ) ಅವರು ಮಾತನಾಡಿ, ಹಾಲಕ್ಕಿ ಸಮುದಾಯ ತೀರ ಹಿಂದುಳಿದಿದೆ. ಅನೇಕ ವರ್ಷಗಳಿಂದ ತುಳಿತಕ್ಕೆ ಒಳಗಾಗಿದೆ. ಹಾಗಾಗಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು. ಅಂಕೋಲಾದ ಹೊನ್ನಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಿಂಡಿ ಆಣೆಕಟ್ಟಿಗೂ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಕಿಂಡಿ ಆಣೆಕಟ್ಟು ನಿರ್ಮಿಸಬಾರದು ಎಂದು ತುಳಸಿ ಗೌಡ ಅವರು ಕೂಡ ಒತ್ತಾಯ ಮಾಡಿದರು.

ಸೀಬರ್ಡ್, ಕೊಂಕಣ ರೈಲ್ವೆ ಯೋಜನೆ ನಿರಾಶ್ರಿತರಿಗೆ ಉದ್ಯೋಗ ನೀಡಬೇಕು. ಹಾಲಕ್ಕಿ ಒಕ್ಕಲು ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ಅಥವಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು. ಕೆಪಿಸಿಐಎಲ್ ಕದ್ರಾ, ಎನ್ಪಿಸಿಐಎಲ್ ಕೈಗಾ ನಿರಾಶ್ರಿತರ ಪರಿಹಾರ, ಪುನರ್ವಸತಿ, ಉದ್ಯೋಗ ಸೌಲಭ್ಯ ನೀಡಬೇಕು. ಅಂಕೋಲಾ ವಿಮಾನ ನಿಲ್ದಾಣ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ಪರಿಹಾರ ಕೊಡಬೇಕು. ಕುಮಟಾ ಬೈಪಾಸ್ ಯೋಜನೆ ಕೈಬಿಡಬೇಕು, ಅರಣ್ಯ ಭೂಮಿ ಅತಿಕ್ರಮವನ್ನು ಸಕ್ರಮ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಹಾಲಕ್ಕಿ ಸಮುದಾಯದ ಸೀಮೆ ಗೌಡರು, ಅರಸು ಗೌಡರು, ಸೀಮೆ ಗೌಡರು, ಹಾಲಕ್ಕಿ ಸುಗ್ಗಿ ಕುಣಿತ ಕಲಾವಿದರಿಗೆ ಮಾಸಾಸನ ನೀಡಬೇಕು. ಪಹಣಿ ಪತ್ರಿಕೆಯಲ್ಲಿರುವ ಕರ್ನಾಟಕ ಸರಕಾರ ನಮೂದನ್ನು ರದ್ದು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Ashika S

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

16 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

30 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

46 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago