ಕಾರವಾರ: ಅರಣ್ಯವಾಸಿಗಳ ಪರ ಅಧಿವೇಶನದಲ್ಲಿ ನಿರ್ಣಯಿಸದಿದ್ದಲ್ಲಿ ಗಾಂಧಿ ಜಯಂತಿಯಂದು ಧರಣಿ

ಕಾರವಾರ: ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಸುಪ್ರೀಂ ಕೋರ್ಟ್ ನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ನಿರ್ಣಯಿಸದಿದ್ದಲ್ಲಿ ಗಾಂಧಿ ಜಯಂತಿಯ ದಿನ ವಿಧಾನಸಭಾ ಅಧ್ಯಕ್ಷರ ಶಿರಸಿ ಮನೆಯ ಮುಂದೆ ಅರಣ್ಯ ಅತಿಕ್ರಮಣದಾರರು ಧರಣಿ ಮಾಡುವರು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾಗಿರುವ ಅರಣ್ಯ ಅತಿಕ್ರಮಣದಾರರನ್ನು ಹಂತಹಂತವಾಗಿ ಒಕ್ಕಲೆಬ್ಬಿಸಲಾಗುವುದೆಂದು ಸುಪ್ರೀಂ ಕೋರ್ಟಿನಲ್ಲಿ ಪರಿಸರವಾದಿಗಳು ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ ಈ ಹಿಂದೆಯೇ ರಾಜ್ಯ ಸರಕಾರ ಪ್ರಮಾಣ ಪತ್ರ ಸಲ್ಲಿಸಿದ್ದು ಇರುತ್ತದೆ. ಅಧಿವೇಶನದಲ್ಲಿ ನಿರ್ಣಯಿಸದಿದ್ದಲ್ಲಿ ಜಿಲ್ಲೆಯ ಹಾಜಿ ಮತ್ತು ಮಾಜಿ ಜನಪ್ರತಿನಿಧಿಗಳ ಮನೆಯ ಮುಂದೆ ಧರಣಿ ಜರುಗಿಸಲಾಗುವುದೆಂಬ ಫೆಬ್ರುವಯಲ್ಲಿ ನಡೆದ ಹೋರಾಟಗಾರರ ವೇದಿಕೆಯ ನಿರ್ಣಯದಂತೆ ಧರಣಿ ಕಾರ್ಯಕ್ರಮ ಜರುಗಿಸಲಾಗುವುದೆಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಕಳೆದ ಮೂರು ಅಧಿವೇಶನದಿಂದಲೂ ಅರಣ್ಯವಾಸಿಗಳ ಪರ ತಿದ್ದುಪಡಿ ಪ್ರಮಾಣ ಪತ್ರ ವಿಧಾನ ಸಭೆಯಲ್ಲಿ ನಿರ್ಣಯಿಸಿ ಸುಫ್ರೀಂ ಕೋರ್ಟಿಗೆ ಸಲ್ಲಿಸಲು ವೇದಕೆಯು ಅಗ್ರಹಿಸಿತು. ಅಲ್ಲದೇ, ಮಳೆಗಾಲದ ಅಧಿವೇಶನದಲ್ಲಿಯೂ ಚರ್ಚಿಸಿ ನಿರ್ಣಯಿಸಲು ಸಭಾಧ್ಯಕ್ಷರಿಗೆ ಪತ್ರ ರವಾನಿಸಲಾಗಿದೆ ಎಂದು ಅವರು ತಿಳಿಸಿದರು.

ಅರಣ್ಯವಾಸಿಗಳು ನಿರಾಶ್ರಿತರಾಗುವ ಆತಂಕ : ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಒಟ್ಟು ೮೯,೧೬೭ ಅರಣ್ಯ ಅತಿಕ್ರಮಣದಾರರು ಅರ್ಜಿ ಸಲ್ಲಿಸಿದ್ದು ಅವುಗಳಲ್ಲಿ ೬೯,೭೭೩ ಅರ್ಜಿಗಳು ತೀರಸ್ಕಾರವಾಗಿದ್ದು ಕೇವಲ ೨,೮೫೫ ಅರ್ಜಿಗಳಿಗೆ ಮಾತ್ರ ಹಕ್ಕು ಮಾನ್ಯತೆ ದೊರಕಿದೆ. ಸುಫ್ರೀಂ ಕೋರ್ಟನಲ್ಲಿ ಒಕ್ಕಲೆಬ್ಬಿಸುವ ಕುರಿತು ಅಂತಿಮ ವಿಚಾರಣೆ ಜರಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ ಸುಫ್ರೀಂ ಕೋರ್ಟನಿಂದ ವ್ಯತಿರಿಕ್ತವಾದ ಆದೇಶಕ್ಕೆ ಕಾರಣವಾಗಿ ಅರಣ್ಯವಾಸಿಗಳು ನಿರಾಶ್ರಿತರಾಗುವರೆಂದು ರವೀಂದ್ರ ನಾಯ್ಕ ಆತಂಕ ವ್ಯಕ್ತಪಡಿಸಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago