ಉತ್ತರಕನ್ನಡ

ಕಾರವಾರ: ಜಿಲ್ಲೆಯ ವಿಭಜನೆ ಬಗ್ಗೆ ಎಲ್ಲ ಶಾಸಕರೊಂದಿಗೆ ಚರ್ಚೆ ಮಾಡಲಾಗುವುದು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿಭಜನೆ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲರ ಭಾವನಾತ್ಮಕ ಅಂಶ ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜಿಲ್ಲೆ ವಿಭಜನೆಯಾದರೆ ಅಭಿವೃದ್ಧಿಯಾಗುತ್ತದೆ. ಯೋಜನೆಗಳು ಬರುತ್ತವೆ ಎನ್ನುವ ಭಾವನೆ ಕೆಲವರಿಗೆ ಇರಬಹುದು. ಆದರೆ ಉತ್ತರ ಕನ್ನಡ ಜಿಲ್ಲೆ ಒಂದಾಗಿರಬೇಕು ಎನ್ನುವ ವಿಚಾರವೂ ಇದೆ. ಇದು ಭಾವನಾತ್ಮ ವಿಷಯವಾಗಿದ್ದರಿಂದ ಶಾಸಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ವಿಭಜನೆಯದಾಗ ಅಭಿವೃದ್ಧಿಯ ದೃಷ್ಟಿಯಿಂದ ಉತ್ತಮವಾಗಿದೆ. ಇನ್ನು ಭಾವನಾತ್ಮಕ ಅಂಶಗಳು ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ವಿಭಜನೆಯಲ್ಲಿ ಕೆಲವರ ವಿರೋಧ ಇದೆ. ಹೀಗಾಗಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ ಹೆಬ್ಬಾರ ಸೇರಿದಂತೆ ಶಾಸಕರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿ ತೀರ್ಮಾನಕ್ಕೆ ಬರುತ್ತೇವೆ ಎಂದರು.

ಸಿ ಆರ್ ಝೆಡ್ ವಲಯದಲ್ಲಿ ಮರಳು ತೆಗೆಯದಂತೆ ಹಸಿರು ಪೀಠವು ಕೊಟ್ಟಿರುವ ಆದೇಶದ ಹಿನ್ನೆಲೆಯಲ್ಲಿ ಮಂಗಳವಾರ ಕರಾವಳಿಯ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸಿ ಆರ್ ಝೆಡ್ ವ್ಯಾಪ್ತಿ ಹೊರತುಪಡಿಸಿ ಇರುವಂತಹ ನದಿಯ ಹರಿವಿನಲ್ಲಿ ಮರಳು ತೆಗೆಯಲು ಅನುಮತಿ ಕೋರಿ ಕೆಲವರು ಮನವಿ ನೀಡಿದ್ದರು. ಹೀಗಾಗಿ ಸಿ ಆರ್ ಝೆಡ್ ವಲಯವನ್ನು ಪುನಃ ಸರ್ವೇ ಮಾಡಲಾಗುತ್ತದೆ ಎಂದರು.

Ashika S

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

22 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

30 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

31 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

40 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

55 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

1 hour ago