ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಟ್ಯಾಂಕರ್ ಮಾಲೀಕರ ಸಂಘದ ಸಭೆ

ಕಾರವಾರ: ಇಲ್ಲಿನ ಬಂದರಿನ ಮೂಲಕ ಆಮದು, ರಫ್ತು ವ್ಯವಹಾರಕ್ಕೆ ಸಂಬಂಧಿಸಿದಂತೆ ಡಾಂಬರು ಮತ್ತು ಮೊಲಾಸಿಸ್ ಸಾಗಿಸುವ ಕುರಿತು ಖಾಸಗಿ ಕಂಪೆನಿಯ ಜೊತೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಟ್ಯಾಂಕರ್ ಮಾಲೀಕರ ಸಂಘದ ಸದಸ್ಯರು ಸಭೆ ನಡೆಸಿದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ನೇತೃತ್ವದಲ್ಲಿ ಸಭೆ ನಡೆಯಿತು. ಡಾಂಬರು ಮತ್ತು ಮೊಲಾಸಿಸ್  ರಸ್ತೆ ಮಾರ್ಗದ ಮೂಲಕ ಸಾಗಿಸಲು ಖಾಸಗಿ ಕಂಪನಿಗಳು ಸ್ಥಳೀಯ ಟ್ಯಾಂಕರ್ ಲಾರಿಗಳನ್ನು ಬಳಸುತ್ತಿಲ್ಲ ಎಂದು ಜಿಲ್ಲಾ ಟ್ಯಾಂಕರ್ ಮಾಲಿಕರ ಸಂಘದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಭೆ ಆಯೋಜಿಸಲಾಗಿತ್ತು.

ಕಾರವಾರದ ವಾಣಿಜ್ಯ ಬಂದರು ಮೂಲಕ ಡಾಂಬರು ಆಮದು ಆಗಿ ಅದನ್ನು ಹುಬ್ಬಳ್ಳಿ ಮಾರ್ಗದ ಮೂಲಕ ಬೆಳಗಾವಿ, ಹುಬ್ಬಳ್ಳಿ ಕಡೆಯಿಂದ ಮೊಲಾಸಿಸ್ ಕಾರವಾರ ವಾಣಿಜ್ಯ ಬಂದರಿಗೆ ಬಂದು ಹಡಗುಗಳ ಮೂಲಕ ರಪ್ತಾಗುತ್ತದೆ. 16 ಚಕ್ರದ ಲಾರಿಗಳು ಮತ್ತು 10, 12 ಚಕ್ರದ ಲಾರಿಗಳ ನಿರ್ವಹಣೆ ವೆಚ್ಚ ಒಂದೇ ಆಗಿದೆ. ಹಾಗಾಗಿ 10, 12 ಚಕ್ರದ ಲಾರಿಗಳು ತಮಗೆ ಉಪಯೋಗ ಆಗುವುದಿಲ್ಲ. ಕಂಪನಿಗೆ ಸೇರಿದ 12 ಚಕ್ರದ ಲಾರಿಗಳೇ ಬಳಕೆ ಇಲ್ಲದೆ ನಿಂತಿವೆ. 16 ಚಕ್ರದ ಲಾರಿಗಳು ಹೆಚ್ಚು ಬಳಕೆಯಲ್ಲಿವೆ ಎಂದು ಕಂಪನಿಗಳ ಮುಖ್ಯಸ್ಥರು ತಿಳಿಸಿದರು.

ಬೆಳಗಾವಿಯ ಮಾಜಿ ಶಾಸಕ ಫಿರೋಜ್ ಶೇಠ್ ಅವರು ತಮ್ಮ ಐಎಂಸಿಎಲ್ ಕಂಪನಿ ಪರವಾಗಿ ಹಾಜರಿದ್ದರು. ಮೈಸೂರು ಮರ್ಕಂಟೈಲ್ ಕಂಪನಿ ಲಿ. ಸಿಇಒ ಎಚ್.ಎಸ್. ಶೆಟ್ಟಿ ಉಪಸ್ಥಿತರಿದ್ದರು.

Sushma K

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago