ಕಾರವಾರ: ವಿಶೇಷ ಚೇತನರಿಗೆ ಪ್ರಮಾಣ ಪತ್ರ ನೀಡಲು ತೊಂದರೆ ನೀಡಬೇಡಿ- ರೂಪಾಲಿ ನಾಯ್ಕ

ಕಾರವಾರ: ವಿಶೇಷ ಚೇತನರಿಗೆ ಪ್ರಮಾಣ ಪತ್ರ ನೀಡಲು ತೊಂದರೆ ಕೊಡದೇ, ಸರ್ಕಾರದಿಂದ ಸಿಗುವ ಸೌಲಭ್ಯ ಜನರಿಗೆ ತಲುಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಶಾಸಕಿ ರೂಪಾಲಿ ಎಸ್. ನಾಯ್ಕ ಎಚ್ಚರಿಕೆ ನೀಡಿದರು.

ಸೋಮವಾರ ಕಾರವಾರ ತಹಸೀಲ್ದಾರರ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕರಿಸಿ ಸಮಸ್ಯೆ ಇತ್ಯರ್ಥಪಡಿಸಿದರು. ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ವೃದ್ಧಾಪ್ಯದ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಜನರಿಗೆ ತಲುಪಬೇಕು. ಸಮಸ್ಯೆಯನ್ನು ನಿವಾರಿಸಿ ಯೋಜನೆಯ ಲಾಭವನ್ನು ಜನರಿಗೆ ನೀಡಬೇಕು ಎಂದರು.

ಮಾಜಾಳಿ ವ್ಯಾಪ್ತಿಯಲ್ಲಿ ಮೀನುಗಾರರ ದೋಣಿಗಳಿಗೆ ಸೀಮೆ ಎಣ್ಣೆ ವಿತರಿಸದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೂಡಲೇ ಅವರಿಗೆ ಸೀಮೆ ಎಣ್ಣೆ ಪೂರೈಕೆ ಮಾಡುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕಡವಾಡ ಕುಂಬಾರವಾಡ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದ್ದು, ಕೈಗಾ ಮುಖ್ಯರಸ್ತೆಯ ಪೈಪ್ಲೈನ್ ನಿಂದ ನೀರನ್ನು ಪೂರೈಸುವಂತೆ ತಾ.ಪಂ.ಇಒ ಅವರಿಗೆ ಸೂಚಿಸಿದರು. ಬೀದಿಬದಿ ವ್ಯಾಪಾರ ಮಾಡುವವರಿಗೆ ಜಾಗದ ಸಮಸ್ಯೆ ಇರುವುದರಿಂದ ನನ್ನನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದನ್ನು ಮುತುವರ್ಜಿವಹಿಸಿ ಮೊದಲಿನಿಂದ ಕುಳಿತುಕೊಳ್ಳುತ್ತಿದ್ದ ಜಾಗವನ್ನು ನೋಡಿಕೊಂಡು ಅನುಕೂಲ ಕಲ್ಪಿಸಬೇಕು ಎಂದು ಪೌರಾಯುಕ್ತರಿಗೆ ಹಾಗೂ ಡಿವೈಎಸ್ಪಿ ಅವರಿಗೆ ತಿಳಿಸಿದರು. ಖಾರ್ಗೆಜೂಗ ರಸ್ತೆ ನಿರ್ಮಾಣ ವಿಳಂಬವಾಗಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದ್ದು, ಇದನ್ನು ಕೂಡಲೆ ಪ್ರಾರಂಭಿಸಬೇಕು. ತಕ್ಷಣ ಕಾಮಗಾರಿ ಪ್ರಾರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಇಂಜೀನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಗೋಟೆಗಾಳಿ ಭೈರಾ ಗ್ರಾಮಸ್ಥರಿಗೆ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸಮಸ್ಯೆಯಾದಾಗ ಸರಿಯಾಗಿ ಸ್ಪಂಧಿಸುತ್ತಿಲ್ಲ ಎಂಬ ದೂರುಬರುತ್ತಿದೆ. ಇದಕ್ಕಾಗಿ ಹೆಸ್ಕಾಂ ಎಇಇ ಅವರಿಗೆ ತರಾಟೆಗೆ ತೆಗೆದುಕೊಂಡು. ಆ ಭಾಗದಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು. ಕಂಬಗಳನ್ನು ಅಳವಡಿಸಬೇಕು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ, ತಹಶೀಲ್ದಾರರು, ಪೌರಾಯುಕ್ತರು, ತಾ.ಪಂ.ಇಒ, ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago