ಕಾರವಾರ: ಖಾರ್ಲ್ಯಾಂಡ್ ತಡಗೋಡೆಯಿಂದ ರೈತರಿಗೆ ಅನುಕೂಲ- ರೂಪಾಲಿ ನಾಯ್ಕ

ಕಾರವಾರ: ಖಾರ್ಲ್ಯಾಂಡ್‌ ಒಡ್ಡು ನಿರ್ಮಾಣದಿಂದ ಉಪ್ಪು ನೀರಿನ ಸಮಸ್ಯೆ ನಿವಾರಣೆಯಾಗಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.

ತಾಲ್ಲೂಕಿನ ಗೊಟೆಗಾಳಿ ಗ್ರಾಮ ಪಂಚಾಯತ ಭೈರಾದಲ್ಲಿ ಕಾರಪೋಯ ಹಳ್ಳಕ್ಕೆ ಹಾಗೂ ಕಟ್ಟೆಹಳ್ಳಕ್ಕೆ ಸ್ವೆಡ್ ನಿರ್ಮಾಣ ಕದ್ರಾ, ಮಲ್ಲಾಪುರ, ಕೆರವಡಿ‌ ಹಾಗೂ ದೇವಳಮಕ್ಕಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕಾರವಾರ-ಅಂಕೋಲಾ ತಾಲ್ಲೂಕಿನಲ್ಲಿ ಕಾಳಿ ಮತ್ತು ಗಂಗಾವಳಿ ನೀರು ಇದ್ದರೂ ಕುಡಿಯುವ ‌ನೀರಿನ ಸಮಸ್ಯೆ ಇದೆ. ಅದಕ್ಕಾಗಿ ಖಾರ್ಲ್ಯಾಂಡ್‌ ಒಡ್ಡು ನಿರ್ಮಾಣ ಮಾಡಬೇಕು ಎಂದು ಶಾಸಕಾಂಗ ಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಆಗ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಕರಾವಳಿ ಜಿಲ್ಲೆಗೆ 300 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಿದ್ದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಖಾರ್ಲ್ಯಾಂಡ್‌ ತಡೆಗೋಡೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸಿದ್ದರು. ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಹಲವಾರು ಕಡೆಗಳಲ್ಲಿ ಖಾರ್ಲ್ಯಾಂಡ್‌ ಒಡ್ಡು ನಿರ್ಮಾಣವಾಗುತ್ತಿದೆ ಎಂದರು.

ಹಲವು ವರ್ಷಗಳ ನಂತರ ಖಾರ್ಲ್ಯಾಂಡ್‌ ತಡೆಗೋಡೆ ನಿರ್ಮಾಣವಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ಕೃಷಿ ಚಟುವಟಿಕೆ ನಡೆಸಲೂ ಕೂಡ ಅನುಕೂಲವಾಗಲಿದೆ.

ಕದ್ರಾ ಗ್ರಾಮ ಪಂಚಾಯತಿಯಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆ:
ಬಿಜೆಪಿ ಸರ್ಕಾರ ಬಂದ ಮೇಲೆ ಯಾವ ಸರ್ಕಾರವೂ ಮಾಡದಷ್ಟು ಯೋಜನೆ ಜಾರಿಗೊಳಿಸಿದೆ. ಬಸವ ವಸತಿ ಯೋಜನೆ ಅಡಿಯಲ್ಲಿ ಈ ಭಾಗದಲ್ಲಿ 17 ಮನೆಗಳಿಗೆ ಮಂಜೂರಾತಿ ನೀಡಿದ್ದೇವೆ. ಇನ್ನೂ ಮಂಜೂರಾತಿ ನೀಡುತ್ತಿದ್ದೇವೆ. ಕದ್ರಾ ಡ್ಯಾಂ ಈಚೆ ಕಡೆ ಇರುವವರಿಗೆ ಸ್ವತ ಮನೆ ಕಟ್ಟಿಸಿಕೊಡಬೇಕೆಂದು ಯಡಿಯೂರಪ್ಪ ಅವರು ಮತ್ತು ಬಸವರಾಜ ಬೊಮ್ಮಾಯಿ ಅವರು ಅನುಮತಿ ನೀಡಿದರೂ ಅರಣ್ಯಭೂಮಿ ಆಗಿದ್ದರಿಂದ ಸಮಸ್ಯೆ ಉಂಟಾಗಿದೆಯೇ ಹೊರತೂ ನಿಮ್ಮನ್ನು ಅನಾಥರನ್ನಾಗಿಸಬೇಕೆಂಬ ಉದ್ದೇಶ ನಮ್ಮದಲ್ಲ. ಕಾಂಗ್ರೆಸ್ ಆಡಳಿತ ಇದ್ದಾಗ 70 ವರ್ಷಗಳಿಂದ ಆಗದ ಕೆಲಸ ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಗುತ್ತಿದೆ.

ಆದರೆ ಕೆಲವರ ಕೆಟ್ಟ ರಾಜಕಾರಣದಿಂದ ಅಭಿವೃದ್ಧಿಗೂ ತೊಂದರೆ ಉಂಟಾಗುತ್ತಿದೆ. ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುವುದು ಹೇಡಿತನ. ಯಾರು ಏನೇ ಮಾಡಲಿ ನನ್ನ ಕ್ಷೇತ್ರದಲ್ಲಿ ಇರುವವರನ್ನು ಕಾಯುವುದು ನನ್ನ ಧರ್ಮ ಎಂದು ಹೇಳಿದರು.

ಮಲ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಮಗಾರಿಗಳ ಭೂಮಿ ಪೂಜೆ:

ಹಲವು ದಿನಗಳ ಕನಸಾಗಿದ್ದ ರಸ್ತೆಗಳಿಗೆ ಅನುದಾನವನ್ನು ನೀಡಲಾಗಿದೆ. ಮಲ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಸ್ತೆಗಳು ಬೇಕೆಂದು ಸಾರ್ವಜನಿಕರು ನೀಡಿದ ಮನವಿಯಂತೆ ಅನುದಾನವನ್ನು ಒದಗಿಸಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ.

ಕೋವಿಡ್‌ ಹಾಗೂ ಪ್ರವಾಹದ ಕಾರಣಕ್ಕೆ ಎರಡು ವರ್ಷ ಅನುದಾನದ ಕೊರತೆಯಿಂದ ಕಾರ್ಯ ನಿರ್ವಹಿಸಲು ಕಷ್ಟವಾಗಿತ್ತು. ಅದರ ನಡುವೆಯೂ ಇಷ್ಟೇಲ್ಲ ಅಭಿವೃದ್ಧಿ ಕೆಲಸಗಳಾಗಿವೆ. ಮುಂದಿನ ದಿನದಲ್ಲಿ ಸ್ಥಳೀಯ ಯುವಕರಿಗೆ ಕೈಗಾದಲ್ಲಿ ಉದ್ಯೋಗ ಲಭಿಸಲಿದೆ. ಅದಕ್ಕಾಗಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಸಂಸದರಾದ ಅನಂತಕುಮಾರ ಹೆಗಡೆ ಅವರು ಸಭೆಯನ್ನು ನಡೆಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಗಿ, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ‌ಸದಸ್ಯರು, ಮುಖಂಡರು, ಊರ ನಾಗರಿಕರು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Gayathri SG

Recent Posts

ಜಿಯೋ ಭರ್ಜರಿ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 min ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

24 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

42 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

55 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago