ಕಾರವಾರ: ಕೊಂಕಣಿ ಭಾಷಾ ಅಭಿಮಾನಿ ಕಾರವಾರ ಇವರ ವತಿಯಿಂದ ವಿವಿಧ ಸಾಧಕರಿಗೆ ಸನ್ಮಾನ

ಕಾರವಾರ:  ನಗರದ  ಹಿಂದೂ ಪ್ರೌಢಶಾಲೆ ಸಭಾಭವನದಲ್ಲಿ‌ ಸೋಮವಾರ ಕೊಂಕಣಿ ಭಾಷಾ ಅಭಿಮಾನಿ ಕಾರವಾರ ಇವರ ವತಿಯಿಂದ ವಿವಿಧ  ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸದಾಶಿವಗಡದ ಚರ್ಚ್ ಫಾದರ್ ಪಿಂಟೊ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಸುನಿಲ ನಾಯ್ಕ ಮಾತನಾಡಿ ಕಾರವಾರ ನಗರದ ಸಭೆಯು ನಗರದ ಪ್ರಮುಖ ರಸ್ತೆಗಳ, ಬಡಾವಣೆಗಳ ಹೆಸರನ್ನು ದೇವನಾಗರಿಯ ಲಿಪಿಯ ಮೂಲಕ ಕೊಂಕಣಿಯಲ್ಲಿ ಬರೆಯಲಾಗಿತ್ತು. ಇದೊಂದು ಖುಷಿ ಪಡುವ ವಿಚಾರವಾಗಿತ್ತು. ಆದರೆ ಈ ಬಗ್ಗೆ ಕನ್ನಡ ಸಂಘಟನೆಗಳ ವಿರೋಧದ ಬಳಿಕ ಅದನ್ನು ನಗರಸಭೆ ಅಳಿಸಿ ಹಾಕಿದೆ.

ಅದಾದ ಬಳಿಕ ಕೊಂಕಣಿ ಭಾಷಿಕರ ಮನವಿಯ ಮೇರೆಗೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರದಲ್ಲಿ ಕೊಂಕಣಿ ಭಾಷಿಕರೂ ಅಧಿಕವಾಗಿರುವುದರಿಂದ ಕೊಂಕಣಿಯಲ್ಲಿಯೂ ಬರೆಸುವ ಬಗ್ಗೆ ಸದಸ್ಯರ ಸರ್ವಾನುಮತದಿಂದ ಠರಾವು ಪಾಸು ಮಾಡಲಾಗಿತ್ತು. ಆದರೆ ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಬಗ್ಗೆ ಕೊಂಕಣಿ ಸಂಘಟನೆಗಳು ಒಟ್ಟಾಗಿ ಕಾರ್ಯ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಹೆಚ್ಚಿನ ಅಂಕ ಪಡೆದ ಕೊಂಕಣಿ ಭಾಷಿಕ ವಿದ್ಯಾರ್ಥಿಗಳಿಗೆ, ಕೊಂಕಣಿ ಭಾಷಿಕ ಶಿಕ್ಷಕರಿಗೆ ಹಾಗೂ ಕಾರವಾರದ ಕೊಂಕಣಿ ಮಾಧ್ಯಮಗಳ ಸಂಪಾದಕರನ್ನು ಸನ್ಮಾನಿಸಲಾಯಿತು. ಈ‌ಸಂದರ್ಭದಲ್ಲಿ ಚಿತ್ತಾಕುಲ ಗ್ರಾಪಂ ಅಧ್ಯಕ್ಷೆ ಸ್ವಾತಿ ದೇಸಾಯಿ, ಹಣಕೋಣ ಗ್ರಾಪಂ ಉಪಾಧ್ಯಕ್ಷೆ ಶ್ರದ್ಧಾ ನಾಯ್ಕ, ಕೊಂಕಣಿ ಮುಖಂಡರು ಮುಂತಾದವರು ಇದ್ದರು.

Ashika S

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

16 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

17 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

35 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

40 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

45 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

51 mins ago