News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ಸರ್ಕಾರಿ ಶಾಲೆಗಳಿಗೀಗ ಕಾಂಪೌಂಡ್ ಭಾಗ್ಯ, ಏಕಕಾಲದಲ್ಲಿ 5 ಕಾಂಪೌಂಡ್ ನಿರ್ಮಾಣ

Five compounds to be constructed simultaneously for government schools
Photo Credit : By Author

ಕಾರವಾರ: ಸರ್ಕಾರಿ ಶಾಲೆಗಳಿಗೆ ಭದ್ರತೆ ಒದಗಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಕಾಂಪೌಂಡ್ ನಿರ್ಮಿಸಲಾಗುತ್ತಿದೆ.

ಶಿರಸಿ ತಾಲೂಕಿನ ದೇವನಳ್ಳಿ ಗ್ರಾಮ ಪಂಚಾಯತ್ ನ ವ್ಯಾಪ್ತಿಯಲ್ಲಿ ವಿವಿಧೆಡೆ ಈಗಾಗಲೇ 5 ಕಾಂಪೌಂಡ್ ಗಳು ಸಿದ್ದವಾಗಿವೆ. 2021-22ನೇ ಸಾಲಿನಲ್ಲಿ ತಲಾ 3,52,500 ರೂ ವೆಚ್ಚದಲ್ಲಿ ಸರಗುಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕರೂರು ಹಾಗೂ ಸರಗುಪ್ಪಾ ಶಾಲೆ ಮತ್ತು ಹಲಸಿನಕಟ್ಟಾ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಹಲಸಿನಕಟ್ಟಾ, ದೇವನಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 96 ಮೀಟರ್ ಗಳಷ್ಟು ಸುಸಜ್ಜಿತ ಕಾಂಪೌಂಡ್ ನಿರ್ಮಿಸಲಾಗಿದೆ.

ದೇವನಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಮಾರು1 ಲಕ್ಷ ರೂ. ವೆಚ್ಚದಲ್ಲಿ ವಾಲಿಬಾಲ್ ಮೈದಾನ ಅಭಿವೃದ್ಧಿಪಡಿಸಲಾಗಿದ್ದು, ಗ್ರಾಮದಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದಂತಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 11ಸರ್ಕಾರಿ ಶಾಲೆಗಳಿದ್ದು, ನರೇಗಾದಡಿ ಪೌಷ್ಟಿಕ ಕೈತೋಟ, ಆಟದ ಮೈದಾನ ಅಭಿವೃದ್ಧಿ, ಶಾಲಾ ಕಾಂಪೌಂಡ್ ಇತ್ಯಾದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ನು ನರೇಗಾದಡಿ ಕೈಗೊಂಡ ಶಾಲಾ ಕಾಮಗಾರಿಗಳಿಗೆ ಗ್ರಾಮಸ್ಥರು ಹಾಗೂ ಊರಿನ ಯುವಕ ಮಂಡಳಿ ಮುಂದೆ ನಿಂತು ಕೆಲಸ ನಿರ್ವಹಿಸುತ್ತಿದೆ. ಇದು ಗ್ರಾಮದ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರ್ ವಾಸನ್ ಅಭಿಪ್ರಾಯ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು