ಕಾರವಾರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ

ಕಾರವಾರ: ೧೨ ಲಕ್ಷ ವಹಿವಾಟು ಇರುವ ಎಲ್ಲ ಆಹಾರ ವಹಿವಾಟು ಪರವಾನಿಗೆದಾರರು ನೊಂದಣಿ ಹಾಗೂ ೧೨ ಲಕ್ಷಕ್ಕಿಂತ ಅಧಿಕ ವಹಿವಾಟು ಇರುವ ಆಹಾರ ವಹಿವಾಟುದಾರರು foscos.fssai.gov.in ವೆಬ್ ಸೈಟ್ ಮೂಲಕ ಕಡ್ಡಾಯವಾಗಿ ಪರವಾನಿಗೆ ಪ್ರಮಾಣ ಪತ್ರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಜಿಲ್ಲಾ ಮಟ್ಟದ ಸಲಹಾ ಸಮಿತಿಯಲ್ಲಿ ಮಾತನಾಡಿದ ಅವರು ಆಹಾರ ಗುಣಮಟ್ಟ ಅಧಿಕಾರಿಗಳು ಜಿಲ್ಲೆಯ ಎಲ್ಲ ಸರ್ಕಾರಿ ಸಂಸ್ಥೆಗಳಾದ ವಸತಿ ನಿಲಯಗಳು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಬಗ್ಗೆ ತಪಾಸಣೆ ನಡೆಸಬೇಕು ಎಂದು ಹೇಳಿದರು.

ಡಿ.ಡಿ.ಪಿ.ಐ, ಅಕ್ಷರದಾಸೋಹ ನೋಡಲ್ ಅಧಿಕಾರಿಗಳು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಅ.೨ ರೊಳಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ ನೊಂದಣಿ ಮಾಡಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ತಾಲೂಕುಗಳಿಗೆ ತಿಂಗಳಿಗೆ ಒಂದು ಸಾರಿ ಬೇಟಿ ನೀಡಲಿಕ್ಕೆ ವೇಳಾ ಪಟ್ಟಿ ತಯಾರಿಸಿ ತಾಲೂಕಿನ ಹೋಟೆಲ್,ರೆಸಾರ್ಟ ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಬೇಟಿ ನೀಡಿ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆ ಬಗ್ಗೆ ಪರೀಶಿಲಿಸಿ ವರದಿ ನೀಡಬೇಕು ಹಾಗೂ ಒಂದು ವೇಳೆ ಅಸುರಕ್ಷಿತ ಆಹಾರ ಪದಾರ್ಥಗಳು ಹಾಗೂ ಕಲಬೇರಕೆ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಶಾಲೆಗಳು, ಅಂಗನವಾಡಿ ಕೇಂದ್ರಗಳು, ರೆಸಾರ್ಟ್, ಹೊಟೇಲಗಳಿಗೆ ಪ್ರವಾಸೋದ್ಯಮ ಇಲಾಖೆಯ ಸಹಕಾರದೊಂದಿಗೆ ಪರವಾನಿಗೆ ಪೆಡದುಕೊಳ್ಳುವಂತೆ ನೋಡಿಕೊಳ್ಳಬೇಕು ಮತ್ತು ನಗರ ಸ್ಥಳಿಯ ಸಂಸ್ಥೆಗಳು ಹಾಗೂ ಪಂಚಾಯತಗಳ ಸಹಕಾರದೊಂದಿಗೆ ಆನ್ ಲೈನ್ ಆಹಾರ ಗುಣಮಟ್ಟದ ನೊಂದಣಿ ಮಾಡಿಸಬೇಕು, ನೊಂದಣಿ ಮಾಡಿಸದೆ ಇರುವಂತವರಿಗೆ ದಂಡ ವಿಧಿಸಿ ಎಂದು ಸೂಚಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ, ಜಿಲ್ಲಾಆರೋಗ್ಯ ಇಲಾಖೆ ಅಧಿಕಾರಿಗಳು, ಕ್ಯಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಇನ್ನಿತರರು ಇದ್ದರು.

Ashika S

Recent Posts

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

4 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

29 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

44 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

1 hour ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

1 hour ago