ಕಾರವಾರ: ಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣದ ಅಡಿಗಲ್ಲು ಸಮಾರಂಭ

ಕಾರವಾರ: ಸಿದ್ದಾಪುರ ತಾಲ್ಲೂಕಿ‌ನ ಕರ್ಜಗಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣದ ಅಡಿಗಲ್ಲು ಸಮಾರಂಭ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ವಿದ್ವಾನ್ ವಿಶ್ವನಾಥ ಭಟ್ ನೀರಗಾ‌ನ ಇವರು ಅಡಿಗಲ್ಲು ಸಮಾರಂಭವನ್ನು ಊರ ನಾಗರಿಕರ ಸಮ್ಮುಖದಲ್ಲಿ ನೆರವೇರಿಸಿದರು.

ಭಕ್ತರ ಸಕಲ ಇಷ್ಟಾರ್ಥಗಳನ್ನು ಈಡೇರಿಸುವ ಚೆಂಡಿಕಾ ದೇವಿಯೂ ಅಪಾರ ಭಕ್ತ ಸಮೂಹವನ್ನು ಹೊಂದಿದೆ.‌ ಶಕ್ತಿ ಪೀಠ ಎಂದೇ ಹೆಸರಾಗಿರುವ ಚೆಂಡಿಕಾ ದೇವಿ ಸನ್ನಿಧಾನವು ಹಲವು ಪವಾಡಗಳಿಗೂ ಕಾರಣವಾದ ಕ್ಷೇತ್ರ. ಜಿಲ್ಲೆ ಹಾಗೂ ಹೊರ ಜಿಲ್ಲೆ ರಾಜ್ಯಗಳ ಭಕ್ತರು ಚೆಂಡಿಕಾ ದೇವಿ ಸನ್ನಿದಾನಕ್ಕೆ ಬಂದು ಇಷ್ಟಾರ್ಥ ಸಿದ್ದಿಗಾಗಿ ಪೂಜೆ ಹರಕೆ ಸಲ್ಲಿಸುತ್ತಾರೆ.

ಆದರೆ ದೇವಿ ದೇವಾಲಯವೂ ಪುರಾತನವಾಗಿದ್ದು ಶಿಥಿಲಗೊಂಡಿದೆ. ಇದೇ ಕಾರಣಕ್ಕೆ ಆಡಳಿತ ಮಂಡಳಿಯೂ ದೇವಾಲಯದ ಪುನರ್ ಸ್ಥಾಪನೆಗೆ ತಿರ್ಮಾನಿಸಿದ ಕಾರಣ ಭಾನುವಾರ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ವಿದ್ವಾನ್ ವಿಶ್ವನಾಥ ಭಟ್ ನೀರಗಾ‌ನ ಇವರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಈ ಶಕ್ತಿ ಕೇಂದ್ರದಲ್ಲಿ ಭವ್ಯ ದೇಗುಲ ನಿರ್ಮಾಣಕ್ಕೆ ಅಂದಾಜು ಖರ್ಚು ಸುಮಾರು 50 ಲಕ್ಷದಷ್ಟು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಭಕ್ತರಿಂದ ತನು-ಮನ-ಧನದ ಸಹಕಾರ ನೀರಿಕ್ಷಿಸಲಾಗುತ್ತಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಕಾರ್ಯಕ್ರಮದಲ್ಲಿ ಶಿರಸಿ ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷ ಅರುಣ್ ಗೌಡ ಮಳಲಿ, ಸೊರಬಾ ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷ ಉಮಾಕಾಂತ ನೆಲ್ಲೂರು, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸುಧಾಕರ್ ಗೌಡ, ಸ್ಥಳೀಯರಾದ ಸುರೇಶ ಎಂ ಶೇಟ್, ಶ್ರೀಪತಿ ಹೆಗಡೆ, ಸುಬ್ರಾಯ ಗೌಡ, ಚಂದ್ರು ಗೌಡ, ದೇವೇಂದ್ರ ಗೌಡ, ಉಮಾಕಾಂತ ಗೌಡ, ಮಹಾಬಲೇಶ್ವರ ಗೌಡ ಸೇರಿದಂತೆ ಊರನಾಗರಿಕರು ಭಕ್ತರು ಇದ್ದರು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

11 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

22 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

29 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

32 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

43 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

52 mins ago