News Karnataka Kannada
Monday, May 13 2024
ಉತ್ತರಕನ್ನಡ

ಕಾರವಾರ: ಕಾರು-ಬಸ್ ನಡುವೆ ಭೀಕರ ಅಪಘಾತ, ನಾಲ್ವರು ಮೃತ

Karwar
Photo Credit : By Author

ಕಾರವಾರ: ಕಾರು ಮತ್ತು ಕೆಎಸ್ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾ ಪಟ್ಟಣ ಬಾಳೆಗುಳಿ ಕ್ರಾಸ್‌ ಸಮೀಪದ ವರದರಾಜ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರವಿವಾರ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕಾರಿನ ನೋಂದಣಿ ಆಧಾರದ ಮೇಲೆ ತಮಿಳುನಾಡು ಮೂಲದವರು ಎಂದು ತಿಳಿದುಬಂದಿದ್ದು ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ.

ಕಾರವಾರ ಕಡೆಯಿಂದ ಅಂಕೋಲಾ ಕಡೆಗೆ ಕಾರು ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ರಸ್ತೆ ಡಿವೈಡರ್ ದಾಟಿ ಅಂಕೋಲಾ ಕಡೆಯಿಂದ ನವಲಗುಂದಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಜೋರಾಗಿ ಗುದ್ದಿದೆ ಎನ್ನಲಾಗಿದೆ.

ಗುದಿದ್ದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, ಅವರಲ್ಲಿ ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ನುಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿಕೊಂಡಿದ್ದ ಕೆಲವರನ್ನು ಪೊಲೀಸರು ಕಬ್ಬಿಣದ ಸಲಾಕೆ ಬಳಸಿ ಕಾರಿನ ಬಾಗಿಲು ಒಡೆದು ಹೊರ ತೆಗೆದಿದ್ದಾರೆ ಎಂದು ಹೇಳಲಾಗಿದೆ. ಮೃತರ ವಿವರಗಳು ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೋಲೀಸ್ ಇಲಾಖೆ ಸಿಬ್ಬಂದಿ, ಐಆರ್‌ಬಿ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಲ್ಲಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು