News Karnataka Kannada
Wednesday, May 01 2024
ಉತ್ತರಕನ್ನಡ

ಕಾರವಾರ: ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

Karwar: Free buses to be arranged for 2nd PUC exam students
Photo Credit : News Kannada

ಕಾರವಾರ: ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.9 ರಿಂದ 29 ರ ವರೆಗೆ ನಡೆಯಲಿದ್ದು, ವಾ.ಕ.ರ.ಸಾ. ಸಂಸ್ಥೆಯು ಧಾರವಾಡ, ಕಾರವಾರ, ಬಾಗಲಕೋಟೆ, ಹಾವೇರಿ ಬೆಳಗಾವಿ ಮತ್ತು ಗದಗ ಭಾಗಗಳಲ್ಲಿ ಪರೀಕ್ಷೆಗಳಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಬೇರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಈ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಸಂಸ್ಥೆಯು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು