ಉತ್ತರಕನ್ನಡ

ಕಾರವಾರ: ರೈತರ ಬೇಡಿಕೆ ಈಡೇರಿಸದ ಸರಕಾರ, ಕ್ರಮಕ್ಕೆ ಒತ್ತಾಯ

ಕಾರವಾರ: ಕೇಂದ್ರ ಸರ್ಕಾರ ರೈತರಿಗೆ ನೀಡಿದ ಭರವಸೆಗಳನ್ನು ವರ್ಷವಾದರೂ ಈಡೇರಿಸದೆ ಇರುವುದನ್ನು ಖಂಡಿಸಿ ಮತ್ತು ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿ, ವಿದ್ಯುತ್ ಮಸೂದೆ ವಾಪಸ್ಸಾತಿ ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಸಂಸತ್ ನಲ್ಲಿ ಧ್ವನಿ ಎತ್ತುವಂತೆ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯೂ ಜಿಲ್ಲೆಯ ಸಂಸದರಿಗೆ ಮನವಿ ಮೂಲಕ ಆಗ್ರಹಿಸಿದೆ.

ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ್ ನಾಯಕ ಕೇಂದ್ರ, ರಾಜ್ಯ ಸರ್ಕಾರಗಳ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಮೂಲಕ ಹೋರಾಟ ನಡೆಸಲಾಗುತ್ತಿದೆ.

ಅದರಂತೆ ಸಂಯುಕ್ತ ಕಿಸಾನ್ ಮೋರ್ಚಾವು ಕಳೆದ ವರ್ಷ ದೇಹಲಿಯಲ್ಲಿ ವರ್ಷಗಳ ಕಾಲ ಹೋರಾಟ ನಡೆಸಿ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿತ್ತು. ಇದಕ್ಕೆ ಸರ್ಕಾರ ಭರವಸೆ ನೀಡಿ, ಚಳುವಳಿ ಹಿಂಪಡೆಯುವತೆಯೂ ವಿನಂತಿಸಿತ್ತು. ಅದರಂತೆ ದೆಹಲಿ ಗಡಿಗಳಲ್ಲಿನ ಪ್ರತಿಭಟನೆಗಳು ಹಿಂಪಡೆದು ವರ್ಷವಾದರೂ ಈವರೆಗೂ ಯಾವುದೇ ಬೇಡಿಕೆಗಳು ಈಡೇರಿಸಿರಲಿಲ್ಲ ಎಂದು ದೂರಿದರು.

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಪಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಅಂಗೀಕರಿಸಬೇಕು. ಎಂ.ಎಸ್.ಪಿ. ಕಾನೂನು ಖಾತರಿಗಾಗಿ ಸಂಯುಕ್ತ ಕಿಸಾನ್ ಮೋರ್ಚಾದ ಪ್ರತಿನಿಧಿಗಳನ್ನು ಸೇರಿಸಿ ಈಗಿನ ಸಮಿತಿ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಇನ್ನು ಸಾಲದ ಸುಳಿಗೆ ಸಿಲುಕಿರುವ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಸಾಲಮನ್ನಾ ಮಾಡಲು ಕಗರಮ ಕೈಗೊಳ್ಳಬೇಕು. ರೈತರಿಗೆ ಕಂಠಕವಾಗಲಿರುವ ವಿದ್ಯುತ್ ಬಿಲ್ ಮಸೂದೆಯನ್ನು ಯಾವುದೇ ರೈತರೊಂದಿಗೆ ಚರ್ಚಿಸದೆ ಪಾಸ್ ಮಾಡಿರುವುದನ್ನು ಸಂಸತ್ತಿನಿದ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಈ ವೇಳೆ ಸಿಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷ ತಿಲಕ್ ಗೌಡ, ಸಂತೋಷ ನಾಯ್ಕ, ಶಿವರಾಮ್ ಪಟಗಾರ, ವಿರೇಶ್ ರಾಥೋಡ್ ಇದ್ದರು.

Ashika S

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

3 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

10 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

27 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

29 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

40 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

40 mins ago