ಉತ್ತರಕನ್ನಡ

ಕಾರವಾರ: ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ತರಬೇತಿ ಕಾರ್ಯಾಗಾರ

ಕಾರವಾರ: ಜಿಲ್ಲೆಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದರು ಕೂಡ ಹಲವಾರು ಸಮಸ್ಯೆಗಳಿವೆ, ಅಂತರ್ಜಲ ನೀರಿನ ಸಮಸ್ಯೆ ಹಾಗೂ ಅದರ ಗುಣಮಟ್ಟದ ನಿವಾರಣೆ ಮತ್ತು ಅಭಿವೃದ್ಧಿಗಾಗಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಪ್ರಿಯಾಂಗಾ ಎಂ. ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಜಲಸಂಪನ್ಮೂಲ, ಗಂಗಾ ಪುನಶ್ಚೇತನ, ಕೇಂದ್ರಿಯ ಅಂತರ್ಜಲ ಮಂಡಳಿ, ಹಾಗೂ ಜಿಲ್ಲಾ ಪಂಚಾಯತ್‌ಸಂಯುಕ್ತಾಶ್ರಯದಲ್ಲಿ ಒಂದು ದಿನದ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, 2020 ರಿಂದ 2024 ರ ವರೆಗೂ ಜಲ ಜೀವನ ಮಿಷನ್‌ಅಭಿಯಾನದಡಿ ಮನೆ ಮನೆಗೆ ಸ್ವಚ್ಚ ಕುಡಿಯುವ ನೀರು ಪೂರೈಕೆಗಾಗಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಉದ್ದೇಶ ಹೊಂದಿದ್ದು ಈಗಾಗಲೇ ಮುಂದಿನ 2 ವರ್ಷಗಳ ಅವಧಿಯಲ್ಲಿ ಮಾಡಬೇಕಾದ ಕಾಮಗಾರಿ ಪಟ್ಟಿಯನ್ನು ತಾಯಾರು ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರನ ಯೋಜನೆ ಅಡಿಯಲ್ಲಿ 300 ಕೋಟಿಗೂ ಅಧಿಕ ವೆಚ್ಚದಲ್ಲಿ ಸುಮಾರು 918 ಡಿಆರ್.ಪಿ ಕಾಮಗಾರಿ ಶುರುವಾಗಿದ್ದು, 500 ಕಾಮಗಾರಿಗಳು ಚಾಲನೆಯಲ್ಲಿವೆ ಎಂದರು.

ಜಿಲ್ಲೆಯಲ್ಲಿ ನೀರಿನ ಮಟ್ಟ ಜಾಸ್ತಿ ಇದ್ದರು ಕೂಡ 200, 300 ಅಡಿ ಗಳಷ್ಟು ಕೊಳವೆಬಾವಿಗಳನ್ನು ಕೊರಿಸಿದರು ಪ್ರತಿಷತ 30 ರಷ್ಟು ಕೊಳವೆಬಾವಿಗಳು ವಿಫಲವಾಗುತ್ತಿವೆ. ನೀರಿನ ಗುಣಮಟ್ಟದಲ್ಲೂ ನಮಗೆ ದೂರು ಕಂಡು ಬರುತ್ತಿದ್ದು, ನೀರಿನಲ್ಲಿ ಕೆಮಿಕಲ್‌, ಫ್ಯ್ಲುರೆಡ್‌ಯುಕ್ತ ಆಸಿಡಿಕ್‌ಕಂಡು ಬರುತ್ತಿವೆ. ಇವೆಲ್ಲವುಗಳನ್ನು ಸರಿಪಡಿಸಲು ಮೊದಲು ಸಂಬಂಧ ಪಟ್ಟ ಸಿಬ್ಬಂದಿಗಳಿಗೆ ತರಬೇತಿ ಅವಶ್ಯಕತೆ ಇದ್ದು ಈ ಕಾರ್ಯಾಗಾರವು ಅವರುಗಳಿಗೆ ಅನುಕೂಲವಾಗಲಿದೆ ಎಂದರು.

ಕಾರ್ಯಾಗಾರದಲ್ಲಿ ನಿವೃತ್ತ ಭೂಗೊಳಶಾಸ್ತ್ರಜ್ಞ ಹಾಗೂ ಡಿಜಿಎಮ್‌ಕಾರವಾರ ಡಾ. ಜಿ.ವಿ ಹೆಗಡೆ ಇವರು ತಮ್ಮ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನಿ ಸಿಜಿಡಬ್ಲ್ಯೂಬಿ, ಎಸ್.ಡಬ್ಲ್ಯೂ.ಆರ್. ಬೆಂಗಳೂರು ದಾಮಲಾರ್, ಕಾರವಾರ ಕಾರ್ಯನಿರ್ವಾಹಕ ಇಂಜೀನಿಯರ್‌ ಆರ್.ಡ್ಬ್ಲೂಎಸ್ ಮತ್ತು ಎಸ್ಡಿ ಪ್ರಕಾಶ, ಬೆಳಗಾವಿ ಪಿ.ಬಿ ಸಂಗೀತಾ, ಜಿಲ್ಲಾ ಜಲಮಂಡಳಿ ಸಿಬ್ಬಂದಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯಾಕ್ರಮದಲ್ಲಿ ಇದ್ದರು.

Sneha Gowda

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

18 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

34 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

54 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago