ಕಾರವಾರ: ಕೂರ್ಮಗಡ ಜಾತ್ರೆ ವೇಳೆ ಸುರಕ್ಷತಾ ಕ್ರಮಕೈಗೊಳ್ಳಲು ಸೂಚನೆ

ಕಾರವಾರ: ನಗರದಲ್ಲಿ ಜನವರಿ 6 ರಂದು ನಡೆಯಲಿರುವ ಕೂರ್ಮಗಡದಲ್ಲಿ ನರಸಿಂಹ ದೇವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಉಪ ವಿಭಾಗಧಿಕಾರಿ ಜಯಲಕ್ಷ್ಮಿ ರಾಯಕೋಡ್ ಹೇಳಿದರು.

ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವಕ್ಕೆ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಈಗಾಗಲೇ ಕಡವಾಡದಿಂದ ನರಸಿಂಹಸ್ವಾಮಿ ದೇವರನ್ನು ತೆಗೆದುಕೊಂಡು ಹೋಗಲು ಮೂರು ರೇತಿ ದೋಣಿಗಳ ವ್ಯವಸ್ಥೆ ಮಾಡಲಾಗಿದೆ ಹಾಗೂ ಸಾರ್ವಜನಿಕರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬೈತಖೋಲ ಮೀನುಗಾರಿಕೆ ಬಂದರುವಿನಿಂದ ದೋಣಿಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಲೈಫ್ ಜಾಕೆಟ್ ಕಡ್ಡಾಯವಾಗಿರುತ್ತದೆ ಹಾಗೂ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ ಎಂದರು.

ಸಭೆಯಲ್ಲಿ ತಹಸೀಲ್ದಾರ್ ನಿಶ್ಚಲ್ ನರೋನ್, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ತಳೇಕರ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಪ್ರತೀಕ್, ಬಂದರು ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಂಜುನಾಥ್, ಚಿತ್ತಾಕೂಲಾ ಪಿಎಸ್ಐ ವಿಶ್ವನಾಥ ಹಾಗೂ ಇನ್ನಿತರ ಅಧಿಕಾರಿಗಳು  ಇದ್ದರು.

Sneha Gowda

Recent Posts

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

2 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

13 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

17 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

27 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

58 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

2 hours ago