ಕಾರವಾರ: ಅನುಷ್ಠಾನ ಇಲಾಖೆಗಳೊಂದಿಗೆ ನರೇಗಾ ಯೋಜನೆಯ ಜಂಟಿ ಸಭೆ

ಕಾರವಾರ: ನರೇಗಾ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಅವಶ್ಯವಿರುವ ಅನುಕೂಲತೆಗಳನ್ನು ಕಲ್ಪಿಸಲು ಅನುಷ್ಠಾನ ಇಲಾಖೆಯೊಂದಿಗೆ ಗ್ರಾಮ ಪಂಚಾಯತ್‌ಗಳು ಕೈಜೋಡಿಸುತ್ತವೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರವೀಣ್ ಬಿ ಕಟ್ಟಿ ಅಭಿಪ್ರಾಯಪಟ್ಟರು.

ಮಂಗಳವಾರ ಮುಂಡಗೋಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ನರೇಗಾ ಯೋಜನೆಯಡಿ ವಿವಿಧ ಇಲಾಖೆಗಳ ಜಂಟಿ ಸಭೆ ನಡೆಸಿ ಅವರು ಮಾತನಾಡಿದರು.

ತಾಲೂಕಿನಾದ್ಯಂತ ವಿವಿಧ ಇಲಾಖೆಗಳಲ್ಲಿ ಮಾನವ ದಿನಗಳ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕೃಷಿ ಪೌಷ್ಟಿಕ ಕೈತೋಟ, ಶಾಲಾ ಪೌಷ್ಟಿಕ ಕೈತೋಟ, ಜಿಪಿಎಲ್ಎಫ್ ನರ್ಸರಿ ನಿರ್ಮಾಣ, ಎನ್ಆರ್.ಎಲ್ಎಂ ಶೆಡ್ ನಿರ್ಮಾಣ, ಅಮೃತ ಸರೋವರ ನಿರ್ಮಾಣ ತ್ವರಿತವಾಗಿ ಕಾರ್ಯಗತವಾಗಬೇಕು. ಹಾಗೂ ಕಾಮಗಾರಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ನರೇಗಾ ಸಹಾಯಕ ನಿರ್ದೇಶಕರಾದ ಟಿ ವಾಯ್ ದಾಸನಕೊಪ್ಪ, ಕೃಷಿ, ತೋಟಗಾರಿಕೆ, ಅಕ್ಷರದಾಸೋಹ, ‌ಸಾಮಾಜಿಕ ಅರಣ್ಯ, ಪಿಆರ್‌ಇಡಿ ಇಲಾಖೆಯ ಅಧಿಕಾರಿಗಳು, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿಎಫ್‌ಟಿ, ಸಿಬ್ಬಂದಿ ವರ್ಗದವರು ಇದ್ದರು.

Sneha Gowda

Recent Posts

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

4 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

19 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

45 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

60 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

2 hours ago