News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರ: ನಾರಗೇರಿಯಲ್ಲಿ ಪ್ರತ್ಯಕ್ಷವಾದ ಕಾಳಿಂಗ ಸರ್ಪ

Karwar: King cobra spotted in Narageri
Photo Credit : By Author

ಕಾರವಾರ: ಬೃಹತ್ ಕಾಳಿಂಗ ಸರ್ಪವೊಂದು ಆಹಾರ ಅರಸಿ ಕಾಡಿನಿಂದ ಜನವಸತಿ ಪ್ರದೇಶಕ್ಕೆ ನುಗ್ಗಿದ ಪರಿಣಾಮ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾದ ಘಟನೆ ತಾಲ್ಲೂಕಿನ ಶಿರವಾಡದ ನಾರಗೇರಿಯಲ್ಲಿ ನಡೆದಿದೆ.

ಸಮೀಪದಲ್ಲೇ ದಟ್ಟ ಅರಣ್ಯ ಇರುವುದರಿಂದ ಅಲ್ಲಿಂದ ಸುಮಾರು 10 ಅಡಿ ಉದ್ದದ ಹೆಬ್ಬಾವು ತನ್ನ ಬೇಟೆಯನ್ನು ಹಿಂಬಾಲಿಸಿಯೋ ಅಥವಾ ಆಹಾರವನ್ನು ಹುಡುಕುತ್ತಲೋ ನಾರಗೇರಿಯ ಜನವಸತಿ ಪ್ರದೇಶಕ್ಕೆ ಬಂದಿತ್ತು. ಈ ವೇಳೆ ಬಂಜರು ಗದ್ದೆಯಲ್ಲಿ ಕಾಳಿಂಗ ಸರ್ಪ ಇರುವುದನ್ನು ಕಂಡ ಗ್ರಾಮಸ್ಥರು ಕೆಲಕಾಲ ಆತಂಕಕ್ಕೆ ಒಳಗಾದರು. ಬಳಿಕ ಉರಗ ಪ್ರೇಮಿ ನಿತಿನ್ ಪೂಜಾರಿ ಅವರಿಗೆ ವಿಷಯ ಮುಟ್ಟಿಸಲಾಯಿತು.

ಸ್ಥಳಕ್ಕಾಗಮಿಸಿದ ನಿತಿನ್ ಪೂಜಾರಿ ಸ್ಥಳೀಯರ ನೆರವಿನಿಂದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು. ಬಳಿಕ ಅರಣ್ಯಾಧಿಕಾರಿಗಳು ಕಾಳಿಂಗವನ್ನು ಜನವಸತಿ‌ ಇಲ್ಲದ. ಅರಣ್ಯ ಪ್ರದೇಶದಲ್ಲಿ ಬಿಟ್ಟು ರಕ್ಷಣೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು