News Karnataka Kannada
Friday, April 12 2024
Cricket
ಉತ್ತರಕನ್ನಡ

ಕಾರವಾರ: ಸುಳ್ಳು ದಾಖಲೆ ಸೃಷ್ಟಿಸಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ ಬಂಧನ

Man arrested for trying to enter naval base by forging documents
Photo Credit : By Author

ಕಾರವಾರ: ನೌಕಾಪಡೆಯ ಉದ್ಯೋಗಿ ಎಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ, ದಾಖಲೆಗಳ ಆಧಾರದ ಮೇಲೆ ಅರ್ಗಾದ ಐ.ಎನ್.ಎಸ್ ಕದಂಬ ನೌಕಾನೆಲೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಕಿರಣ್ ಎಸ್.ಆರ್ (28) ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅರ್ಗಾದ ನೌಕಾನೆಲೆಯ ಮುಖ್ಯ ದ್ವಾರಕ್ಕೆ ಬಂದ ಆರೋಪಿ ತನ್ನನ್ನು ನೌಕಾಪಡೆಯ ಪ್ರೊಬೆಷನರಿ ಸಬ್ ಲೆಫ್ಟಿನೆಂಟ್ ಆಫೀಸರ್ ಎಂದು ಹೇಳಿದ್ದಾನೆ.

ಮಾನವ ಸಂಪನ್ಮೂಲ ಮತ್ತು ಯೋಜನಾ ನಿರ್ದೇಶನಾಲಯದಿಂದ ತನ್ನ ನೇಮಕಾತಿಯಾಗಿದೆ ಎಂದು ಸುಳ್ಳು ಹೇಳಿದ್ದಾನೆ. ತನ್ನ ಗುರುತಿನ ಚೀಟಿ ಅಧಿಕಾರಿಗಳಿಗೆ ತೋರಿಸಿದ್ದಾನೆ. ದಾಖಲೆಗಳು ಮತ್ತು ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ ನಕಲಿ ಎಂಬುದು ಪತ್ತೆಯಾಗಿದೆ. ಬಳಿಕ ನೌಕಾನೆಲೆಯ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಕಾರವಾರದ ಗ್ರಾಮೀಣ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು