ಕಾರವಾರ: ಪಾಕಿಸ್ತಾನಿ ಮಹಿಳೆಯನ್ನು ಕರೆತಂದು ವಿಸಾ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗೆ ಜೈಲು

ಕಾರವಾರ: ಪಾಕಿಸ್ತಾನಿ ಮಹಿಳೆ ಹಾಗೂ ಆಕೆಯನ್ನು ವಿವಾಹವಾಗಿ ಭಾರತಕ್ಕೆ ಕರೆ ತಂದ ಭಟ್ಕಳದ ಪತಿಗೆ ನಗರದ ಜಿಲ್ಲಾ ಸತ್ರ ನ್ಯಾಯಾಲಯವು ವಿಸಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಜೈಲು ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ತೀರ್ಪು ನೀಡಿದೆ.

ಭಟ್ಕಳದ ಮೌಲಾನಾ ಆಜಾದ್ ರೋಡ್‌ನ ನಿವಾಸಿ ಮಹ್ಮದ್ ಇಲಿಯಾಸ್ ಹಾಗೂ ಆತನ ಪಾಕಿಸ್ತಾನಿ ಪತ್ನಿ ನಾಸಿರಾ ಪರವೀನ್ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ. ಮಹ್ಮದ್ ಇಲಿಯಾಸ್ ಈತನು 2014 ರ ಜೂನ್ 17 ರಂದು ಸ್ಥಳೀಯ ಭಟ್ಕಳ ಪೊಲೀಸ್ ಠಾಣೆಗೆ ಹಾಗೂ ಕಾರವಾರದ ಎಫ್.ಆರ್.ಓ. ರವರಿಗೆ ಮಾಹಿತಿ ನೀಡದೇ ಪಾಕಿಸ್ತಾನಿ ಪ್ರಜೆಯಾದ ತನ್ನ ಪತ್ನಿಯನ್ನು ವೀಸಾ ವಿಸ್ತರಣೆಯ ಕುರಿತು ಭಟ್ಕಳದಿಂದ ದೆಹಲಿಗೆ ಕರೆದೊಯ್ದು ವಿದೇಶಿ ಕಾಯ್ದೆಯಂತೆ ವಿಸಾ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಭಟ್ಕಳ ನಗರ ಠಾಣೆಯ ಪಿಐ ಪ್ರಶಾಂತ ಎಸ್. ನಾಯಕ ಅವರು ಈ ಕುರಿತು ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಎಸ್. ವಿಜಯಕುಮಾರ ಅವರು ಆರೋಪಿ ಮಹ್ಮದ್ ಇಲಿಯಾಸ್ ಈತನಿಗೆ 1 ತಿಂಗಳ ಸಾದಾ ಸಜೆ ಹಾಗೂ 10 ಸಾವಿರ ರೂ. ದಂಡ ಹಾಗೂ ಆರೋಪಿ ನಾಸಿರಾಳಿಗೆ 6 ತಿಂಗಳ ಸಾದಾ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ತನುಜಾ ವಿ. ಹೊಸಪಟ್ಟಣ ಅವರು ವಾದವನ್ನು ಮಂಡಿಸಿದ್ದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

3 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

5 hours ago