News Karnataka Kannada
Sunday, May 05 2024
ಉತ್ತರಕನ್ನಡ

ಕಾರವಾರ: ಚುನಾವಣೆ, ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಮುರುಡೇಶ್ವರದಲ್ಲಿ ಸಭೆ

Karwar: Meeting to be held at Murudeshwar to discuss elections, party organisation
Photo Credit : By Author

ಕಾರವಾರ: ಮುಂಬರುವ ಚುನಾವಣೆ ಮತ್ತು ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಲು ಮುರುಡೇಶ್ವರದಲ್ಲಿ ಡಿ. ೨೦ ಮತ್ತು ೨೧ ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಮತ್ತು ಪಕ್ಷದ ಸಂಘಟನೆಯ ದೃಷ್ಟಿಯಿಂದ ಇದೊಂದು ಮಹತ್ವದ ಸಭೆಯಾಗಿದೆ ಎಂದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಸಭೆಯಲ್ಲಿ ಪಕ್ಷದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಬರುವ ಪ್ರತಿನಿಧಿಗಳಿಗಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಮುಂಬರುವ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಿಲ್ಲೆಗೆ ಆಹ್ವಾನಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಪ್ರಯತ್ನಗಳನ್ನು ನಡೆಸಿದೆ. ಪ್ರಧಾನಿ ಮೋದಿ ಅವರನ್ನು ಆಹ್ವಾನಿಸುವುದಕ್ಕೆ ಸಂಬಂಧಿಸಿದಂತೆ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದರು.

ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ಸಿಕ್ಕರೆ ಎಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎನ್ನುವ ಬಗ್ಗೆ ಪಕ್ಷದ ರಾಷ್ಟ್ರೀಐಯ ಕಾರ್ಯದರ್ಶಿ ಸಿ.ಟಿ. ರವಿ ಅವರೊಂದಿಗೆ ಜಿಲ್ಲೆಯ ಭೌಗೋಳಿಕ ಪರಿಸ್ಥಿತಿಯ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಅವರೂ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ತಿಳಿಸಿದರು. ಜೈ ಶಂಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಬುಟ್ಟೊ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಕುರಿತು ನೀಡಿರುವ ಹೇಳಿಕೆ ಪಾಕಿಸ್ತಾನ ಹತಾಶ ಮನಸ್ಥಿತಿಯನ್ನು ತೋರಿಸುತ್ತದೆ ಎಂದರು. ಪಾಕಿಸ್ತಾನ ಭಯೋತ್ಪಾದಕರ ಅಡಗುತಾಣವಾಗಿದೆ.

ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಮ್‌ಎಫ್), ವಿಶ್ವಬ್ಯಾಂಕ್ ಸೇರಿದಂತೆ ವಿಶ್ವದ ಆರ್ಥಿಕ ನೆರವು ನೀಡುವ ಸಂಸ್ಥೆಗಳು ಪಾಕಿಸ್ತಾನವನ್ನು ಗ್ರೇ ಪಟ್ಟಿಯಲ್ಲಿ ಸೇರಿಸಿವೆ. ಅವರಿಗೆ ಆರ್ಥಿಕ ನೆರವು ನೀಡಲು ಯಾರೂ ಮುಂದೆ ಬರುತ್ತಿಲ್ಲ. ಹೀಗಾಗಿ ಅವರು ದಿವಾಳಿಯ ಅಂಚಿನಲ್ಲಿದ್ದಾರೆ ಎಂದು ನಾಯ್ಕ ಟೀಕಿಸಿದರು. ಪಕ್ಷದ ಜಿಲ್ಲಾ ವಕ್ತಾರ ನಾಗರಾಜ ನಾಯಕ, ಎನ್.ಎಸ್. ಹೆಗಡೆ, ಉಷಾ ಹೆಗಡೆ, ಚಂದ್ರು ಎಸಳೆ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಶ ಗುನಗಿ, ನಗರ ಮಂಡಲದ ಅಧ್ಯಕ್ಷ ನಾಗೇಶ ಕುರ್ಡೇಕರ್, ನಗರಸಭೆ ಸದಸ್ಯೆ ರೋಶ್ನಿ ಮಾಳ್ಸೇಕರ್, ಪ್ರಕಾಶ ಪತ್ರಿಕಾಗೋಷ್ಠಿಯಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು