ಕಾರವಾರ: ಮಾಜಾಳಿ ಬಳಿ ಡಿವೈಡರ್ ತೆರವು, ಸ್ಥಳೀಯರ ಮನವಿಗೆ ಶಾಸಕಿ ಸ್ಪಂದನೆ

ಕಾರವಾರ: ರಾಷ್ಟೀಯ ಹೆದ್ದಾರಿ -೬೬ರಿಂದ ದೇವತಿ ದೇವಸ್ಥಾನ, ಸೈಲವಾಡಾ, ಗಾಂವಗೇರಿಗೆ ಹೋಗಲು ಅನುಕೂಲವಾಗುವಂತೆ ಹೆದ್ದಾರಿಯಲ್ಲಿದ್ದ ಡಿವೈಡರ್ ತೆರವು ಮಾಡಿ ಸ್ಥಳೀಯರಿಗೆ ದಾರಿ ಮಾಡಿಕೊಡುವಂತೆ ಶಾಸಕಿ ರೂಪಾಲಿ ನಾಯ್ಕ ಅವರು ಐಆರ್‌ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕಿ ರೂಪಾಲಿ ನಾಯ್ಕ ಅವರಿಗೆ ಮಾಜಾಳಿಯ ಸಾರ್ವಜನಿಕರು ಮನವಿ ಸಲ್ಲಿಸಿದರು. ರಾಷ್ಟೀಯ ಹೆದ್ದಾರಿಯ ಮೂಲಕ ಕಾರವಾರದಿಂದ ದೇವತಿ ದೇವಸ್ಥಾನ, ಸೈಲ್ ವಾಡಾ ಮತ್ತು ಗಾಂವಗೇರಿಗೆ ಹೋಗುವವರು ಮಾಜಾಳಿ ಚೆಕ್ ಪೋಸ್ಟ್ಹೋಗಿ ಸುತ್ತು ಹಾಕಿ ಬರಬೇಕಾಗುತ್ತದೆ. ಇದೂ ಅಲ್ಲದೇ ಕೆಲ ವಾಹನಗಳು ಮಾಜಾಳಿಯ ಮೀನು ಮಾರುಕಟ್ಟೆಯ ವೃತ್ತದಿಂದ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಗಳು ಇರುತ್ತವೆ.

ಹಾಗಾಗಿ ಹೆದ್ದಾರಿಯಲ್ಲಿ ಹಾಕಲಾಗಿರುವ ಡಿವೈಡರ್ ತೆರವು ಮಾಡಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀಯರು ಶಾಸಕರ ಬಳಿ ಮನವಿ ಮಾಡಿದರು. ಮನವಿ ಸ್ಪಂದಿಸಿದ ಶಾಸಕಿ ರೂಪಾಲಿ ಅವರು ಸ್ಥಳದಲ್ಲಿಯೇ ಐಆರ್‌ಬಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು, ಹೆದ್ದಾರಿಯಿಂದ ಗಾಂವಗೇರಿಗೆ ಹೋಗುವ ಮಾರ್ಗವು ತುಂಬ ಹಳೆಯ ರಸ್ತೆಯಾಗಿದೆ. ಅಲ್ಲದೇ ಜನವಸತಿ ಪ್ರದೇಶ ಇದಾಗಿರುವುದರಿಂದ ಡಿವೈಡರ್ ತೆರವು ಮಾಡಿ ಸ್ಥಳೀಯರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.  ಶಾಸಕರ ಮನವಿ ಸ್ಪಂದಿಸಿದ ಐಆರ್‌ಬಿ ಅಧಿಕಾರಿಗಳು ಡಿವೈಡರ್ ತೆರವು ಮಾಡುವ ಭರವಸೆ ನೀಡಿದ್ದಾರೆ.

Ashika S

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

27 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

33 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

45 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

51 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

55 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago