ಕಾರವಾರ: ಶಾಸಕಿ ರೂಪಾಲಿ ನಾಯ್ಕ ರಿಂದ ನರೇಗಾದಡಿ ನಿರ್ಮಿತ ಘನ ತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ

ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ವಂದಿಗೆ ಗ್ರಾಮ ಪಂಚಾಯತಿ ಪಕ್ಕದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಗುರುವಾರ ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್ ನಾಯ್ಕ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯ ಹೋಗಲಾಡಿಸಿ ಸ್ವಚ್ಛ ಹಾಗೂ ಸಮೃದ್ಧ ಪರಿಸರ ಕಾಪಾಡುವ ಉದ್ದೇಶದಿಂದ ಸರಕಾರ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಗರದಿಂದ ಗ್ರಾಮೀಣ ಭಾಗಕ್ಕೆ ಕೊಟ್ಟಿದೆ. ಕಸ ವಿಲೇವಾರಿ ಹಾಗೂ ಸಂಗ್ರಹಣಾ ಪ್ರಕ್ರಿಯೆ ಒಂದು ಉತ್ತಮ ವ್ಯವಸ್ಥೆಯಾಗಿದ್ದು, ಈ ಮೂಲಕ ಪ್ರತಿಯೊಬ್ಬರು ತಮ್ಮ ಮನೆ, ಗ್ರಾಮ, ವಾರ್ಡ್‌ಗಳನ್ನ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದರು.

ನರೇಗಾ ಸಹಾಯಕ ನಿರ್ದೇಶಕರಾದ ಸುನಿಲ ಎಂ ಅವರು ಮಾತನಾಡಿ, ಅತ್ಯಂತ ಕಡಿಮೆ ಅವಧಿಯಲ್ಲಿ ಗುಣಮಟ್ಟದ ಘಟಕ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿಯಿಂದ ವಿತರಿಸುವ ಕಸದ ಡಬ್ಬಿಯಲ್ಲಿಯೇ ಮನೆಯಲ್ಲಿನ ನಿರುಪಯುಕ್ತ ವಸ್ತು ಹಾಗೂ ಒಣ ಕಸ, ಎಣ್ಣೆ, ಹಾಲಿನ ಪ್ಯಾಕೆಟ್ ಹಾಗೂ ನೀರು, ಆಲ್ಕೊಹಾಲ್, ಪಾನೀಯಾ ಬಾಟಲ್‌ಗಳನ್ನು ಒಟ್ಟುಗೂಡಿಸಿ ಇಡಬೇಕು. ಸ್ವ-ಸಹಾಯ ಸಂಘದ ಮಹಿಳೆಯರು ಗ್ರಾಮ ಪಂಚಾಯತಿಯಿಂದ ಒದಗಿಸಲಾದ ಕಸದ ಗಾಡಿಯ ಮೂಲಕ ಪ್ರತಿ ಮನೆಗೆ ತೆರಳಿ ಕಸ ಸಂಗ್ರಹಿಸಿ, ಸಂಸ್ಕರಣೆ ಮಾಡಲಿದ್ದಾರೆ. ಇದರಿಂದ ಸ್ವ-ಸಹಾಯ ಸಂಘದ ಮಹಿಳೆಯರಿಗೂ ಕೆಲಸ ದೊರೆಯಲಿದ್ದು, ಈ ಕಾರ್ಯಕ್ಕೆ ಜನರ ಸಹಕರಿಸಬೇಕು ಎಂದರು. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪುಷ್ಪಲತಾ ನಾಯಕ ಮಾತನಾಡಿ, ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕೇವಲ ಅಧ್ಯಕ್ಷರಿಂದ ಆಗಿದ್ದಲ್ಲ. ಈ ಕಾರ್ಯಕ್ಕೆ ಗ್ರಾಪಂ ಸರ್ವ ಸದಸ್ಯರು, ಗ್ರಾಮದ ಜನರು, ಅಧಿಕಾರಿಗಳು ಸಹಕರಿಸಿದ್ದರ ಪರಿಣಾಮ ಘಟಕ ಸ್ಥಾಪನೆಯಾಗಿದೆ. ಗ್ರಾಮಸ್ಥರು ಘಟಕದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರೀಶ್ ನಾಯ್ಕ್, ನರೇಗಾ ತಾಲೂಕಾ ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ, ತಾಂತ್ರಿಕ ಸಂಯೋಜಕ ಅನಿಲ ಗಾಯತ್ರಿ, ಸಹಾಯಕ ತಾಂತ್ರಿಕ ಇಂಜಿನಿಯರ್ ವಸಂತ ಹೆಗಡೆ, ಎನ್‌ಆರ್‌ಎಲ್‌ಎಂನ ತಾಂತ್ರಿಕ ಸಂಯೋಜಕ ಗುರುಪ್ರಸಾದ ಹೆಗಡೆ, ಸಮೂಹ ಮೇಲ್ವಿಚಾರಕಿ ಮುಕ್ತಾ ನಾಯಕ, ಸ್ವ-ಸಹಾಯ ಸಂಘದ ಮಹಿಳೆಯರು, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

Gayathri SG

Recent Posts

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

11 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

18 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

35 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago