News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ದೇಶದ ಅಭಿವೃದ್ಧಿಗೆ ಪೂರಕ ಬಜೆಟ್ ಎಂದ ಎಂಎಲ್‌ಸಿ ಗಣಪತಿ ಉಳ್ವೇಕರ್

MLC Ganapati Ulwekar said that this is a supplementary budget for the development of the country.
Photo Credit : By Author

ಕಾರವಾರ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಅವರು ಜನ ಪರ ಬಜೆಟ್ ಮಂಡಿಸಿದ್ದು ದೇಶದ ಅಭಿವೃದ್ಧಿಗೆ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಕೇಂದ್ರ ಸರ್ಕಾರ ಮಂಡಿಸಿರುವ ಅಮೃತ ಕಾಲ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿ, 2023-24ನೇ ಸಾಲಿನ ಬಜೆಟ್ ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಕ್ರಮ ವಹಿಸಲಾಗಿದೆ. ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್ ಸಂಸ್ಥೆಗೆ ಅಗತ್ಯ ನೆರವು ನೀಡಲಾಗಿದೆ. ತೋಟಗಾರಿಕೆ ಬೆಳೆಗಳ ಇಳುವರಿ ಹೆಚ್ಚಳ ಹಾಗೂ ಬೆಳೆಪದ್ಧತಿ ಸುಧಾರಣೆಗಾಗಿ ಶುದ್ಧ ಸಸಿ ಕಾರ್ಯಕ್ರಮ, ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ ಮಾಡುವ ಗುರಿ, ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ ಸ್ಥಾಪನೆ, ಅಗ್ರಿ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಹೊಸ ನಿಧಿಯ ಘೋಷಣೆ. ಮುಂದಿನ ೩ ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ನೆರವು ಸಿಗಲಿದೆ ಎಂದಿದ್ದಾರೆ.

ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡುವ ಮೂಲಕ ಕೃಷಿ ಸಾಲದ ಗುರಿಯನ್ನು20 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ. ಕಳೆದ ಆರು ವರ್ಷಗಳಲ್ಲಿ ದೇಶದ ಕೃಷಿ ಕ್ಷೇತ್ರವು ಸರಾಸರಿ ವಾರ್ಷಿಕ ಶೇ.4.6 ಬೆಳವಣಿಗೆ ದರದಲ್ಲಿ ಬೆಳೆಯುತ್ತಿದೆ ಎಂದರು.

63,000 ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿಗಳನ್ನು 2,561 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಗಣಕೀಕರಣಗೊಳಿಸಲಾಗುತ್ತಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ರೂ 2 ಲಕ್ಷದಷ್ಟು ಸಾಲವನ್ನು ನಗದು ರೂಪದಲ್ಲಿ ನೀಡಲು ಮತ್ತು ರೂ 2 ಲಕ್ಷದಷ್ಟು ಹಣವನ್ನು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ. ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ಪ್ರೋತ್ಸಾಹ, ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಪಿಎಂ ಮತ್ಸ್ಯ ಸಂಪದ ಯೋಜನೆಯಡಿ ರೂ.6,000 ಕೋಟಿ ಅನುದಾನ. “ದೇಖೋ ಅಪ್ನಾ ದೇಶ್” ಪ್ರವಾಸೋದ್ಯಮಕ್ಕೆ ಹೊಸ ಯೋಜನೆ.

ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್-ಪಾರಂಪರಿಕ ಕುಶಲಕರ್ಮಿಗಳಿಗೆ ಸಹಾಯದ ಪ್ಯಾಕೇಜ್. ವಸತಿ ಕ್ಷೇತ್ರಕ್ಕೆ ಈ ವರ್ಷ ರೂ 79,000 ಕೋಟಿ ಅನುದಾನ ಘೋಷಣೆ. ರೈಲ್ವೆ ಇಲಾಖೆಯಲ್ಲಿ ರೂ 2.40 ಲಕ್ಷ ಕೋಟಿ ಬಂಡವಾಳ ಹೂಡಿಕೆ. ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯತಿ ನೀಡಿ, ಮಹಿಳೆಯರು, ಎಸ್‌ಸಿ, ಎಸ್‌ಟಿ ವರ್ಗದವರಿಗೆ, ಯುವಕರಿಗೆ ಪ್ರಮುಖ ಆದ್ಯತೆ ನೀಡಿ ಸಶಕ್ತ, ಸ್ವಾವಲಂಬಿ ನವಭಾರತ ನಿರ್ಮಾಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಅಮೃತ ಕಾಲ ಬಜೆಟ್ ಅತ್ಯಂತ ಆಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು