ಕಾರವಾರ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ನಿಮಿತ್ತ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ತೊಡಗಿ ಕೊಳ್ಳಲು ಅನುಕೂಲವಾಗುವಂತೆ ಅಂಚೆ ಮತಪತ್ರದ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ.
ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಆದೇಶದ ಪ್ರತಿ, ಮತದಾರರ ಗುರುತಿನ ಚೀಟಿಯೊಂದಿಗೆ ಅರ್ಜಿ ನಮೂನೆ 12 ನ್ನು ಭರ್ತಿ ಮಾಡಿ ಸಂಬಂಧಿಸಿದ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಮೇ 2 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ, ಅಂಚೆ ಮತಪತ್ರದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.