ಕಾರವಾರ: ಸಿಆರ್.ಝೆಡ್ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕಡ್ಡಾಯ

ಕಾರವಾರ: ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಬರುವ ಯಾವುದೇ ರೀತಿಯ ಕಟ್ಟಡ, ಕಾಮಗಾರಿಗಳಿಗೆ ಕರಾವಳಿ ನಿಯಂತ್ರಣ ವಲಯದ ಸಮಿತಿಯು ಅನುಮತಿ ನೀಡದ ಹೊರತು ಈ ಕುರಿತು ಸಮಿತಿಯ ಗಮನಕ್ಕೆ ತಾರದೇ ಯಾವ ಇಲಾಖೆಯು ನಿರಾಕ್ಷೇಪಣಾ ಪತ್ರ ನೀಡದಂತೆ ಪತ್ರ ಬರೆದು ತಿಳಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ ಅವರು ಕರಾವಳಿ ನಿಯಂತ್ರಣ ವಲಯದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕರಾವಳಿ ವಲಯ ನಿರ್ವಹಣಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಾವಳಿ ನಿಯಂತ್ರಣ ವಲಯದ ಸಮಿತಿಯು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕ.ನಿ.ವ.ಸ ನಿಯಮಉಲ್ಲಂಘನೆ ಕುರಿತು ಸೂಕ್ತ ಪರಿಶೀಲನೆ ಮಾಡಿ ನಿರಾಕ್ಷೇಪಣಾ ಪತ್ರ ನೀಡಿದ ನಂತರದಲ್ಲಿ ಮಾತ್ರ ಸಂಬಂಧಿಸಿದ ಇತರೆ ಇಲಾಖೆಗಳು ನಿರಾಕ್ಷೇಪಣಾ ಪತ್ರ ನೀಡುವಂತೆ ಅಧಿಕಾರಿಗಳು ಇನ್ನುಳಿದ ಇಲಾಖಾ ಅಧಿಕಾರಿಗಳಿಗೆ ತಿಳಿಸಬೇಕು. ಪಿಆರ್‌ಡಿ, ಲೋಕೋಪಯೋಗಿ, ಸಿಆರ್‌ಝೆಡ್ ವಲಯದಲ್ಲಿ ಕಾಮಗಾರಿ ಆರಂಭಿಸಲು ಸಿಆರ್‌ಝೆಡ್ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ತಿಳಿಸಬೇಕು ಎಂದು ಹೇಳಿದರು.

ಸ್ಥಳೀಯ ಮಟ್ಟದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ ನಿರಾಕ್ಷೇಪಣಾ ಪತ್ರ ನೀಡುವ ಕುರಿತಾದ ವಿಚಾರದಲ್ಲಿ ಆಗಬಹುದಾದ ಸಮಸ್ಯೆಯನ್ನು ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಬೇಕು. ಸಿಆರ್‌ಝೆಡ್ ನಿಯಮ ಉಲ್ಲಂಘಣೆ ಮಾಡಿದವರಿಗೆ ನೋಟಿಸ್ ನೀಡಬೇಕು. ಇಲ್ಲಿಯವರೆಗೆ ಸಿಆರ್‌ಝೆಡ್ ನಿಂದ ಅನುಮತಿ ನೀಡಿದ ಹಾಗೂ ರಾಜ್ಯ ಮಟ್ಟದ ಸಮಿತಿಗೆ ವರ್ಗಾಯಿಸಲಾದ ಅರ್ಜಿಗಳ ನಿಖರವಾದ ಅಂಕಿ-ಸAಖ್ಯೆಗಳನ್ನು ನೀಡಬೇಕು. ನಿರಾಕ್ಷೇಪಣಾ ಪತ್ರ ನೀಡುವಲ್ಲಿ ವಿಳಂಬ ನೀತಿ ಅನುಸರಿಸದೇ ಕಾಮಗಾರಿ ನಡೆಸಲು ಬೇಕಾಗುವ ಅನುಮತಿ ನೀಡಲು ಬೇಕಾದ ದಾಖಲೆಗಳ ಕುರಿತು ಮಾಹಿತಿ ನೀಡಿ, ಕಾಮಗಾರಿನಡೆಸಲು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿ ನಿರಾಕ್ಷೇಪಣಾ ಪತ್ರ ನೀಡಲು ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದರು.

ನದಿಯಲ್ಲಿ ಪ್ರವಾಸೋದ್ಯಮದ ಕುರಿತಾದ ಯಾವುದೇ ರೀತಿಯ ಕಾಮಗಾರಿಗಳನ್ನು ಚಟುವಟಿಕೆಗಳನ್ನು ಕೈಗೊಳ್ಳಲು ಯಾರಿಗೂ ಅನುಮತಿ ಇರುವುದಿಲ್ಲ. ಸಂಬಂಧಿಸಿದ ಇಲಾಖೆಯ ಅನುಮತಿ ಪಡೆದ ನಂತರವೇ ಕಾಮಗಾರಿ ಪ್ರಾರಂಭಿಸಲು ಸೂಚಿಸಬೇಕು. ವಿಪತ್ತು ನಿರ್ವಹಣೆ ಮಾಡಲು ಸೈರನ್‌ಟವರ್ ಸ್ಥಾಪಿಸಲು ಸೂಕ್ತ ಮಾರ್ಗದರ್ಶನ ನೀಡಬೇಕು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ, , ನಗರಸಭೆ ಪೌರಾಯುಕ್ತ ಆರ್.ಪಿ. ನಾಯ್ಕ, ಕಾರವಾರ ಸಿಆರ್‌ಝಡ್‌ನ ಎಸಿಎಫ್ ಐ.ಆರ್. ದಫೇದಾರ್, ಮೀನುಗಾರಿಕೆ ಇಲಾಖೆ ಜಿಲ್ಲಾ ನಿರ್ದೇಶಕ ರವೀಂದ್ರ ತಳೇಕರ್ ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.

Sneha Gowda

Recent Posts

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

1 min ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

28 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

39 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

59 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

1 hour ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

2 hours ago