News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ರಾಜಕೀಯ ಬದಿಗಿಟ್ಟು ಮಾನವೀಯತೆಯಿಂದ ಸರಕಾರದ ಯೋಜನೆಗಳನ್ನ ಫಲಾನುಭವಿಗಳಿಗೆ ತಲುಪಿಸಿ!

Roopali
Photo Credit : By Author

ಕಾರವಾರ: ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯವಿದ್ದು, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರೆಲ್ಲರೂ ಚಿಕ್ಕಪುಟ್ಟ ರಾಜಕೀಯವನ್ನು ಬದಿಗಿಟ್ಟು ಮಾನವೀಯತೆ ನೆಲೆಗಟ್ಟಿನಲ್ಲಿ ಒಗ್ಗಟ್ಟಿನಿಂದ ತಮ್ಮ ತಮ್ಮ ಜವಾಬ್ದಾರಿ ಅರಿತುಕೊಂಡು ಸರಕಾರ ಜಾರಿಗೊಳಿಸುವ ಪ್ರತಿಯೊಂದು ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕಿದೆ ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಅಭಿಪ್ರಾಯಪಟ್ಟರು.

ಜಿಲ್ಲೆಯ ಕಾರವಾರ ತಾಲೂಕು ಪಂಚಾಯತ್‌ನ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ದೂರದೃಷ್ಟಿ ಯೋಜನೆ ತಯಾರಿಕೆ ಕುರಿತ ತಾಲೂಕ ಮಟ್ಟದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಜರುಗುವ ವಾರ್ಡ್ ಸಭೆ, ಗ್ರಾಮ ಸಭೆಗಳಲ್ಲಿ ಜನಸಾಮಾನ್ಯರಿಂದ ಬರುವ ಬೇಡಿಕೆಗಳನ್ನು ಗ್ರಾಪಂ ಸಭೆಗಳಲ್ಲಿ ಸಮಗ್ರವಾಗಿ ಚರ್ಚಿಸಬೇಕು. ಜೊತೆಗೆ ಸಣ್ಣಪುಟ್ಟ ರಾಜಕೀಯವನ್ನ ಬದಿಗಿಟ್ಟು ಸರ್ವಾನುಮತದಿಂದ ಸ್ಥಳೀಯ ಜನರಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಜನಸಾಮಾನ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳ ನೇತೃತ್ವದಲ್ಲಿ ತಯಾರಾಗುವಂತ ಪೂರ್ವ ನಿಯೋಜಿತ ಯೋಜನೆಗಳಿಂದ ಮಾತ್ರ ಸಮಗ್ರ ಅಭಿವೃದ್ಧಿಯ ಕನಸು ನನಸಾಗಲು ಸಾಧ್ಯವಿದೆ ಎಂದರು.

ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಆದರೆ ಅವುಗಳು ಕಾರ್ಯರೂಪಕ್ಕೆ ಬರಲು ಸಾಕಷ್ಟು ಅಡೆತಡೆಗಳು ಎದುರಾಗುತ್ತಿವೆ. ಹೀಗಾಗಿ ಐದು ವರ್ಷಗಳ ದೂರದೃಷ್ಟಿ ಯೋಜನೆಯ ತಯಾರಿಕೆ ಪ್ರಕ್ರಿಯಯನ್ನು ಕಾರ್ಯರೂಪಕ್ಕೆ ತರಲಾಗಿದೆ. ಪ್ರಸ್ತುತ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇರದ ಕಾರಣ ಗ್ರಾಮ ಪಂಚಾಯತಿ ಹಂತದ ಜನಪ್ರತಿನಿಧಿಗಳು, ಅಧಿಕಾರಿಗಳು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪರಸ್ಪರ ಸಮನ್ವಯತೆ ಸಾಧಿಸಿಕೊಂಡು ಸರಕಾರದ ಆದೇಶದ ಅನ್ವಯ ಪ್ರತಿಯೊಬ್ಬರು ದೂರದೃಷ್ಟಿ ಯೋಜನೆ ತಯಾರಿಕೆ ಪ್ರಕ್ರಿಯಲ್ಲಿ ಪಾಲ್ಗೊಳ್ಳಬೇಕು. ಜೊತೆಗೆ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುಂತೆ ಯೋಜನೆ ತಯಾರಿಸಿ ಜನಪರ ಕಾಳಜಿ ತೋರಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಳಾಖೆಯ ಉಪ ನಿರ್ದೇಶಕರು ಹಾಗೂ ದೂರದೃಷ್ಟಿ ಯೋಜನೆ ತಯಾರಿಕೆಯ ಕಾರವಾರ ತಾಲೂಕಾ ನೋಡಲ್ ಅಧೀಕಾರಿಗಳಾದ ಶ್ಯಾಮಲಾ ಸಿ.ಕೆ. ಅವರು ಮಾತನಾಡಿ, ಐದು ವರ್ಷದಲ್ಲಿ ಯಾವುದಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೆಕೆಂಬ ಚರ್ಚೆಯ ಮೂಲಕ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳನ್ನ ಮುಂದಿಟ್ಟುಕೊಂಡು ಐದು ವರ್ಷದ ದೂರದೃಷ್ಟಿ ಯೋಜನೆ ತಯಾರಿಸಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ಸ್ಪಷ್ಟವಾದ ಆದೇಶ ಹೊರಡಿಸಿದ್ದು, ಪ್ರತಿಯೊಬ್ಬರೂ ಪರಸ್ಪರ ಹೊಂದಾಣಿಕೆಯೊಂದಿಗೆ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದರು. ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಬಾಲಪ್ಪನವರ ಆನಂದಕುಮಾರ ಅವರು, ಗ್ರಾಮ ಪಂಚಾಯತಿಯ ಐದು ವರ್ಷಗಳ ದೂರದೃಷ್ಟಿ ಯೋಜನೆಯ ಸಿದ್ಧತೆಯ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ವೇಳೆ ಗ್ರಾಮ ಪಂಚಾಯತಿ ದೂರದೃಷ್ಟಿ ಯೋಜನೆ ತಯಾರಿಕೆಯ ಕುರಿತಾದ ಕೈಪಿಡಿ ಬಿಡುಗಡೆ ಮಾಡಿದರು. ನಂತರದಲ್ಲಿ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನ ಆಚರಿಸಿ ಪ್ರತಿಜ್ಞೆ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನರೇಗಾ ಸಹಾಯಕ ನಿರ್ದೇಶಕರಾದ ರಾಮದಾಸ ನಾಯ್ಕ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಪ್ರಿಯಾ ನಾಯಕ, ವ್ಯವಸ್ಥಾಪಕರಾದ ಅನಿತಾ ಬಂಡಿಕಟ್ಟಿ, ಭಾರತಿ ಕಾಂಬಳೆ, ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು, ಪಂಚಾಯತಿ ಮಟ್ಟದ ದೂರದೃಷ್ಟಿ ಯೋಜನೆಯ ನೋಡಲ್ ಅಧೀಕಾರಿಗಳು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಐಇಸಿ ಸಂಯೋಜಕರಾದ ಫಕ್ಕೀರಪ್ಪ ತುಮ್ಮಣ್ಣನವರ ಸೇರಿದಂತೆ ತಾಪಂ ಸಿಬ್ಬಂದಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು