ಕಾರವಾರ: ಯಲ್ಲಾಪುರ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ಹಾಗೂ ವಿವಿಧ ಸಹಕಾರಿ ಸಂಘದ ವತಿಯಿಂದ ಆಯೋಜಿಸಿದ್ದ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಆರ್.ಎನ್.ಹೆಗಡೆ ಗೋರ್ಸಗದ್ದೆ ಅವರಿಗಾಗಿ ಆಯೋಜನೆ ಮಾಡಿದ್ದ ಅಭಿನಂದನಾ ಸಮಾರಂಭದಲ್ಲಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಾಲ್ಗೊಂಡರು.
ಸಚಿವರಾದ ಶಿವರಾಮ ಹೆಬ್ಬಾರ್ ಅವರು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ, ಗಣ್ಯರೊಂದಿಗೆ ಆರ್.ಎನ್.ಹೆಗಡೆ ಗೋರ್ಸಗದ್ದೆ ಅವರನ್ನು ಸನ್ಮಾನಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಸೇರಿದಂತೆ ವಿವಿಧ ಸಹಕಾರಿ ಸಂಘದ ಅಧ್ಯಕ್ಷರು, ಗಣ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.