ಕಾರವಾರ: ಪ್ರಗತಿಯಲ್ಲಿರುವ ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿನಾಚರಣೆ

ಕಾರವಾರ: ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೂರಲ್ಲೇ ಕೆಲಸ ಪಡೆದು ಅಭಿವೃದ್ಧಿಯೆಡೆಗೆ ಸಾಗಲು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೆರವಾಗುತ್ತಿದ್ದು, ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿದ್ದಾಪುರ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಶಾಂತ ರಾವ್ ಅವರು ಅಭಿಪ್ರಾಯಪಟ್ಟರು.

ಶುಕ್ರವಾರ ತಾಲೂಕಿನ ಮನಮನೆ ಗ್ರಾಮ ಪಂಚಾಯತ್ನಲ್ಲಿ ಅಮೃತ ಸರೋವರ ನಿರ್ಮಾಣದಡಿ ಕೆರೆ ಅಭಿವೃದ್ಧಿಪಡಿಸಲಾಗುತ್ತಿರುವ ಕಾಮಗಾರಿ ಸ್ಥಳದಲ್ಲಿ ‘ರೋಜಗಾರ್ ದಿನ’ ಆಚರಿಸಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿ, ರಸ್ತೆ ಕಾಮಗಾರಿ, ಚರಂಡಿ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಮನಮನೆ ಗ್ರಾಮ ಪಂಚಾಯತ್ ನ ಮಳಲವಳ್ಳಿ ಗ್ರಾಮದಲ್ಲಿ ಐಗಳಕೊಪ್ಪದಲ್ಲಿ ಕೆರೆ ಅಭಿವೃದ್ಧಿ, ಹಂಚಿನಕೇರಿಯಲ್ಲಿ ಚರಂಡಿ ನಿರ್ಮಾಣ, ಹಾಗೂ ಕಚ್ಚಾ ರಸ್ತೆಗಳ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಕೂಲಿಕಾರರು ತಾವು ಕೆಲಸಕ್ಕೆ ಬರುವುದರೊಂದಿಗೆ ತಮ್ಮ ಸುತ್ತಲಿನವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಸಿಗುವ ಸೌಲಭ್ಯಗಳ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯಬೇಕು. ಜೊತೆಗೆ ನರೇಗಾದಡಿ ಉದ್ಯೋಗ ಪಡೆದು, ವೈಯಕ್ತಿಕ ಜೀವನ ಹಾಗೂ ಸಾಮುದಾಯಿಕ ಅಭಿವೃದ್ಧಿಗೆ ಮುಂದಾಗಲು ಕೂಲಿಕಾರರು ಸಹಕರಿಸಬೇಕಿದೆ ಎಂದರು.

ನರೇಗಾದಡಿ 60 ವರ್ಷ ಮೇಲ್ಪಟ್ಟವರು, ವಿಕಲಚೇತನರು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ 50% ರಿಯಾಯಿತಿಯಲ್ಲಿ ಕೆಲಸ ನೀಡಿ ಪೂರ್ತಿ ಕೂಲಿ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಲು ಎಲ್ಲರೂ ಮುಂದಾಗಬೇಕಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಟರಾಜ್ ನಾಯ್ಕ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ, ಗ್ರಾಮ ಪಂಚಾಯತ್ ಸಿಬ್ಬಂದಿ, ಮೇಟ್ಸ್ ಹಾಜರಿದ್ದರು.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

5 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

6 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

27 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

38 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

40 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

51 mins ago