News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಚಂದಾವರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ 93.50 ಲಕ್ಷ ರೂ. ವಶ

Rs 93.50 lakh unaccounted cash seized at Chandavar check post Seized
Photo Credit : By Author

ಕಾರವಾರ: ಆಟೋದಲ್ಲಿ ಅಕ್ರಮವಾಗಿ 93.50 ಲಕ್ಷ ಹಣ ಸಾಗಿಸುತ್ತಿದ್ದಾಗ , ಫ್ಲೈಯಿಂಗ್ ಸ್ಕ್ವಾಡ್ ಗೆ ಅಕ್ರಮ ಸಾಗಾಟದವರು ಸಿಕ್ಕಿ ಬಿದ್ದಿದ್ದಾರೆ‌ . ಶಿವಮೊಗ್ಗ ದಿಂದ ಕುಮಟಾಕ್ಕೆ ಹಣ ಸಾಗಿಸಲಾಗುತ್ತಿತ್ತು.  ಕುಮಟಾ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ಬಳಿ ಈ ಘಟನೆ ಶುಕ್ರವಾರ ನಸುಕಿನ 2.30 ರ ವೇಳೆಗೆ ನಡೆದಿದೆ.

ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹಣ ಸಮೇತ ವಶಕ್ಕೆ ಪಡೆಯಲಾಗಿದೆ. ಕುಮಟಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಆಟೋ-ರಿಕ್ಷಾದಲ್ಲಿ 93ಲಕ್ಷದ 50 ಸಾವಿರ ರೂ ಗಳನ್ನು ಎಸ್.ಎಸ್.ಟಿ. ತಂಡ ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡದವರು ವಶಪಡಿಸಿಕೊಂಡಿದ್ದು, ಹಣವನ್ನು ಉಪಖಜಾನೆ ಕುಮಟಾದಲ್ಲಿ ನಿಯಮಾನುಸಾರ ಇರಿಸಲಾಗಿದೆ. ಈ ಹಣ ಯಾರಿಗೆ ಸೇರಿದ್ದು, ಯಾವ ಪಕ್ಷಕ್ಕೆ ಸೇರಿದ್ದು ಎಂಬ ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು